ಜಿಲ್ಲೆ

ರಸ್ತೆಯಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ, ಸ್ಥಳದಲ್ಲೇ ಸಾವು | | Hit by car

Hit by car : ರಸ್ತೆಯಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಕಾರು ಹರಿದ ಪರಿಣಾಮ ಆ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್​.ಆರ್​.ಪುರ ತಾಲೂಕಿನ ಮಡಬೂರು ಬಳಿ ಇತ್ತೀಚಿಗೆ ನಡೆದಿದೆ.

ಚಂದ್ರಶೇಖರ್(55) ಮೃತ. ಕಾರು ಚಾಲಕ ಗುಂಡಿ ತಪ್ಪಿಸಲು ಹೋಗಿ, ಚಂದ್ರಶೇಖರ್​ ಎಂಬ ವ್ಯಕ್ತಿಗೆ ಡಿಕ್ಕಿ ಹೊಡೆದ ಪರಿಣಾಮ ಆತನಿಗೆ ಗಂಭೀರ ಗಾಯಗೊಂಡ ಹಿನ್ನೆಲೆ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಯ ನಂತರ ಅಲ್ಲಿಯ ಸ್ಥಳೀಯರು ಸರ್ಕಾರದ ವಿರುದ್ಧ ರಸ್ತೆಗಿಳಿದು ಪ್ರತಿಭಟನೆ ನಡೆಸಿದರು. ಅಲ್ಲದೆ, ಪ್ರತಿಭಟನಾಕಾರರು ತಮ್ಮ ಕೋಪ ಮತ್ತು ಹತಾಶೆಗಳನ್ನು ತೀರಿಸುವ ಸಲುವಾಗಿ ಗುಂಡಿ ಬಿದ್ದಿರುವ ರಸ್ತೆಯ ಮೇಲೆ ಬಾಳೆ ಸಸಿಗಳನ್ನು ನೆಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು, ಅಧಿಕಾರಿಗಳು ಗುಂಡಿಬಿದ್ದಿರುವ ರಸ್ತೆಯನ್ನು ಕೂಡಲೇ ಸರಿಪಡಿಸಬೇಕೆಂದು ಆಗ್ರಹಿಸಿದರು. (ಏಜೆನ್ಸೀಸ್​)