ಜಿಲ್ಲೆ

ಸಿಡಿಲು ಬಡಿದು ವ್ಯಕ್ತಿ ಸಾವು

ವಿಜಯವಾಣಿ ಸುದ್ದಿಜಾಲ ಧಾರವಾಡ

ಸಿಡಿಲು ಬಡಿದು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ತಾಲೂಕಿನ ಮುಗದ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ. ಗ್ರಾಮದ ರಸೂಲ್‌ಸಾಬ ಮೆಹಬೂಬಸಾಬ ಚಾಂದವಾಲೆ (63) ಮೃತ ವ್ಯಕ್ತಿ. ಇವರು ಗ್ರಾಮ ಹೊರವಲಯದ ಗಂಗವ್ವ ಅವರಾದಿ ಎಂಬುವರ ಜಮೀನಿನಲ್ಲಿ ಸಂಜೆ 6 ಗಂಟೆ ಸುಮಾರಿಗೆ ಆಡು ಮೇಯಿಸುತ್ತಿದ್ದ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.