ತುಮಕೂರು: ತಾಲೂಕಿನ ಹೆಬ್ಬೂರು ಹೋಬಳಿ ಬನ್ನಿಕುಪ್ಪೆಯಲ್ಲಿ ಹೆಣ್ಣು ಚಿರತೆ ಸೆರೆಸಿಕ್ಕಿದೆ. ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಮಂಗಳವಾರ 8-9 ವರ್ಷದ ಹೆಣ್ಣು ಚಿರತೆ ಬಿದ್ದಿದೆ.
ತುಮಕೂರು, ಕುಣಿಗಲ್ ಹಾಗೂ ಗುಬ್ಬಿ ತಾಲೂಕುಗಳ ಗಡಿಗೆ ಹೊಂದಿಕೊಂಡ ಈ ಪ್ರದೇಶ ವ್ಯಾಪ್ತಿಯಲ್ಲಿ ಚಿರತೆ ಹಾವಳಿ ಹೆಚ್ಚಿದ್ದು ಇತ್ತೀಚಿಗೆ ಗುಬ್ಬಿ ತಾಲೂಕು ಸಿಎಸ್ ಪುರದ ಮಣಿಕುಪ್ಪೆ ಗ್ರಾಮದ ಭಾಗ್ಯಮ ಎಂಬುವರು ಚಿರತೆ ದಾಳಿಗೆ ತುತ್ತಾಗಿದ್ದರು.
ಈ ಭಾಗದಲ್ಲಿ ನರಭಕ್ಷಕ ಚಿರತೆ ಹಾವಳಿ ಇದ್ದು ಅರಣ್ಯ ಇಲಾಖೆ ಚಿರತೆ ಸೆರೆಹಿಡಿಯಲು ಕ್ರಮವಹಿಸಿತ್ತು. ಅರಣ್ಯ ಸಂರಕ್ಷಣಾಧಿಕಾರಿ ಎಚ್.ಸಿ. ಗಿರೀಶ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಡಿ.ರಾಜೇಂದ್ರ, ವಲಯ ಅರಣ್ಯ ಅಧಿಕಾರಿ ಎಚ್ಎಲ್ ನಟರಾಜ್. ಕೆ ಟಿ ಮಂಜುನಾಥ್, ಸಿ.ರವಿ ಹಾಗು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದರು.
ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್ಗಾಗಿ ನಮ್ಮ ಫೇಸ್ಬುಕ್ ಪುಟ ಲೈಕ್ ಮಾಡಿ ಮತ್ತು ಫಾಲೋ ಮಾಡಿ..