ಹಾವೇರಿ: ವಿಪರೀತ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯೊಬ್ಬ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ದೇವಗಿರಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಆನಂದ ಚನ್ನಬಸಪ್ಪ ಹೊಬರಡಿ (28) ಮೃತ ವ್ಯಕ್ತಿ.
ಈತ ವಿಪರೀತ ಮದ್ಯ ಸೇವನೆ ಮಾಡುತ್ತಿದ್ದ. ಇದರಿಂದ ಬೇಸತ್ತು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.