ಜಿಲ್ಲೆ

ವಿಪರೀತ ಮದ್ಯ ಸೇವಿಸುತ್ತಿದ್ದ ವ್ಯಕ್ತಿ ಆತ್ಮಹತ್ಯೆ

Haveri - Kariyappa Aralikatti

ಶಿಗ್ಗಾಂವಿ: ವಿಪರೀತ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹಿರೇಮಣಕಟ್ಟಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಗದಿಗೆಪ್ಪ ಗೂಳಪ್ಪ ಬೀರಣ್ಣನವರ (50) ಮೃತ ವ್ಯಕ್ತಿ.

ಈತ ವಿಪರೀತ ಮದ್ಯ ಸೇವಿಸುತ್ತಿದ್ದ. ಇದರಿಂದ ಹೊರಬರಲಾಗದೆ ಮನನೊಂದು ಜಮೀನುವೊಂದರಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಶಿಗ್ಗಾಂವಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.