ಜಿಲ್ಲೆ

ಸಮಾಜದ ಸುವ್ಯವಸ್ಥೆ ಕಾಪಾಡುವುದು ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯ: ಡಿಸಿ ಡಾ.ಎಚ್.ಎನ್.ಗೋಪಾಲಕೃಷ್ಣ ಹೇಳಿಕೆ

reportermys

ಮಂಡ್ಯ: ಮಾನವ ಹಕ್ಕು ಎಂಬುದು ಕಾನೂನಿನ ಚೌಕಟ್ಟಿನೊಳಗಿನ ಹಕ್ಕಾಗಿದೆ. ಮಾನವ ಹಕ್ಕುಗಳನ್ನು ರಕ್ಷಿಸುವುದು ಎಲ್ಲ ಸಂಸ್ಥೆಗಳ ಆದ್ಯ ಕರ್ತವ್ಯವಾಗಿದೆ ಎಂದು ಡಿಸಿ ಡಾ.ಎಚ್.ಎನ್.ಗೋಪಾಲಕೃಷ್ಣ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಮಾನವ ಹಕ್ಕುಗಳ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯದ ಯಾವುದೇ ಕಚೇರಿ ಅಥವಾ ಸಂಸ್ಥೆಯಿಂದಾಗಲೀ ಯಾವುದೇ ರೀತಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾದ ಪಕ್ಷದಲ್ಲಿ ಅಥವಾ ಮಾನವ ಹಕ್ಕುಗಳ ರಕ್ಷಣೆ ಮಾಡಲು ವಿಫಲವಾಗಿರುವ ಸಂದರ್ಭಗಳಲ್ಲಿ, ತೊಂದರೆಗೆ ಒಳಗಾದವರು ಅವರ ಕುಂದು ಕೊರತೆಗಳನ್ನು ಪರಿಹರಿಸಲು, ನ್ಯಾಯ ದೊರಕಿಸಿಕೊಳ್ಳಲು ಮಾನವ ಹಕ್ಕುಗಳ ಆಯೋಗವನ್ನು ಸಂಪರ್ಕಿಸಬಹುದೆಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಜಿಲ್ಲಾಧಿಕಾರಿ ಕಚೇರಿಯ ಹಿರಿಯ ಸಹಾಯಕ ಸ್ವಾಮಿಗೌಡ ಇತರರಿದ್ದರು.