ಜಿಲ್ಲೆ

ಡಿಜಿಟಲ್ ಗ್ರಂಥಾಲಯ ಕಟ್ಟಡ ನಿರ್ಮಾಣಕ್ಕೆ ಕ್ರಮ: ಶಾಸಕ ರವೀಂದ್ರ ಶ್ರೀಕಂಠಯ್ಯ ಭರವಸೆ

reportermys

ಶ್ರೀರಂಗಪಟ್ಟಣ: ತಾಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದ ಕಟ್ಟಡಗಳ ನಿರ್ಮಾಣಕ್ಕೆ ಸ್ಥಳೀಯ ಗ್ರಂಥಾಲಯ ಕರ ಹಾಗೂ ಸಿಗುವ ಅನುದಾನ ಬಳಸಲು ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಭರವಸೆ ನೀಡಿದರು .

ಪಟ್ಟಣದ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದ ಶಾಸಕರ ಕಚೇರಿಯಲ್ಲಿ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಸಹಾಯಕರ ಸಂಘದ ವತಿಯಿಂದ ವಿವಿಧ ಬೇಡಿಕೆಗಳುಳ್ಳ ಮನವಿ ಸ್ವೀಕರಿಸಿದ ಬಳಿಕ ಮಾತನಾಡಿದರು.

ತಾಲೂಕಿನಲ್ಲಿ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳಿಗೆ ಮೂಲ ಸೌಕರ್ಯ ವ್ಯವಸ್ಥೆಯೊಂದಿಗೆ ಸುಸಜ್ಜಿತ ಕಟ್ಟಡ ನಿರ್ಮಿಸಲು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.

ಕಳೆದ ವಾರ ತಾಲೂಕಿನ ಬಲ್ಲೇನಹಳ್ಳಿ ಗ್ರಾಮ ಪಂಚಾಯಿತಿ ಗ್ರಂಥಾಲಯ ಕಚೇರಿಗೆ ಜಿಪಂ ಸಿಇಒ ಶಾಂತಾ ಹುಲ್ಮನಿ ಹಾಗೂ ತಾಪಂ ಇಒ ವೇಣು ನೇತೃತ್ವದ ನಿಯೋಗ ಭೇಟಿ ನೀಡಿ ಗ್ರಂಥಾಲಯದ ಕಾರ್ಯವೈಖರಿ ಹಾಗೂ 16 ಸಾವಿರ ಡಿಜಿಟಲ್ ಸದಸ್ಯತ್ವ ನೋಂದಣಿ ಆಗಿರುವ ಬಗ್ಗೆ ಪರಿಶೀಲಿಸಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇದು ತಮಗೆ ಸಂತಸ ತಂದಿದೆ ಎಂದರು.

ಗ್ರಂಥಪಾಲಕರಾದ ಕೂಡಲಕುಪ್ಪೆ ಸೋಮಶೇಖರ್ ಹಾಗೂ ಬಳ್ಳೆಕೆರೆ ಭೈರವೇಶ್ ಇತರರು ಉಪಸ್ಥಿತರಿದ್ದರು.