ಸುಂಟಿಕೊಪ್ಪ: ಇಲ್ಲಿನ ಶ್ರೀಪುರಂ ಅಯ್ಯಪ್ಪಸ್ವಾಮಿ ಕ್ಷೇತ್ರದಲ್ಲಿ 53ನೇ ವರ್ಷದ ವಾರ್ಷಿಕ ಮಂಡಲಪೂಜಾ ಮಹೋತ್ಸವ ಡಿ.27 ರಂದು ವಿವಿಧ ವಿಶೇಷ ಪೂಜೆ ಮತ್ತು ದೈವಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಶ್ರೀಪುರಂ ಅಯ್ಯಪ್ಪಸ್ವಾಮಿ ಕ್ಷೇತ್ರದ ಆಡಳಿತ ಮಂಡಳಿ ತಿಳಿಸಿದೆ.
ಈ ಕುರಿತು ಮಾಹಿತಿ ನೀಡಿರುವ ಆಡಳಿತ ಮಂಡಳಿ ಅಧ್ಯಕ್ಷ ಬಿ.ಎಂ.ಸುರೇಶ್ ಪುಟ್ಟ ಅವರು ಡಿ. 27ರಂದು ಪೂರ್ವಾಹ್ನ ಗಣಪತಿ ಹೋಮದೊಂದಿಗೆ ಕಾರ್ಯಕ್ರಮಗಳು ಆರಂಭಗೊಂಡು ಬಿಲ್ವಪತ್ರೆ ಅರ್ಚನೆ, ತುಳಸಿ ಅರ್ಚನೆ ಪಂಚಾಮೃತ ಅಭಿಷೇಕ ನಡೆಯಲಿದೆ. ಅಂದು ಮಧ್ಯಾಹ್ನ 1ರಿಂದ 4 ಗಂಟೆಯವರೆಗೆ ಅನ್ನ ಸಂತರ್ಪಣೆ ನಡೆಯಲಿದ್ದು, ಸಂಜೆ 6.30 ಕ್ಕೆ ದೀಪಾರಾಧನೆ ಮತ್ತು ಮೆರವಣಿಗೆ ನಡೆಯಲಿದೆ. ರಾತ್ರಿ 7.30ಕ್ಕೆ ದುರ್ಗಾಪೂಜೆ, ಮಹಾಮಂಗಳಾರತಿ ನಡೆಯಲಿದ್ದು, ಪ್ರಸಾದ ವಿನಿಯೋಗ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.