ಜಿಲ್ಲೆ

ಸಂಶೋಧನಾ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡುವಂತೆ ಒತ್ತಾಯ

ಆರ್.ಕೃಷ್ಣ

ಮೈಸೂರು: ಮೈಸೂರು ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಕಾರ್ಯ ನಡೆಸುತ್ತಿರುವ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಮೂರ್ನಾಲ್ಕು ವರ್ಷಗಳಿಂದ ಲ್ಯಾಪ್‌ಟಾಪ್ ನೀಡಿಲ್ಲ. ಇದರಿಂದ ಶೈಕ್ಷಣಿಕ ಪ್ರಗತಿಗೆ ಅಡ್ಡಿಯಾಗಿದೆ ಎಂದು ವಿಶ್ವವಿದ್ಯಾಲಯದ ಸಂಶೋಧಕರ ಸಂಘದ ಅಧ್ಯಕ್ಷ ಶಿವಶಂಕರ್ ದೂರಿದರು.
ಈ ಹಿಂದೆ ವಿತರಿಸಿದ್ದ ಲ್ಯಾಪ್‌ಟಾಪ್‌ಗಳು ಕಳಪೆಯಾಗಿದ್ದವು. ಈ ಬಗ್ಗೆ ಮುಖ್ಯಮಂತ್ರಿ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವರಿಗೆ ಹಲವು ಬಾರಿ ಪತ್ರ ಬರೆದರೂ ಪ್ರಯೋಜನವಾಗಿಲ್ಲ. ಹೀಗಾಗಿ ಕೂಡಲೇ ಉತ್ತಮ ಗುಣಮಟ್ಟದ ಲ್ಯಾಪ್‌ಟಾಪ್ ವಿತರಿಸಬೇಕು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
ಸಂಶೋಧನಾ ಕಾರ್ಯಗಳಿಗೆ ಅನುಕೂಲವಾಗುವಂತೆ ಲ್ಯಾಪ್‌ಟಾಪ್ ನೀಡಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಸಂಬಂಧಪಟ್ಟ ಸಚಿವರು, ಇಲಾಖೆ, ಸರ್ಕಾರದ ವಿರುದ್ಧ ಅನಿರ್ದಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದರು.
ಸಂಘದ ಪದಾಧಿಕಾರಿಗಳಾದ ಎಂ.ಲಿಂಗರಾಜು, ಪ್ರದೀಪ್‌ರಾಜು ಇರಸವಾಡಿ, ನವೀನ್, ಸಿದ್ದಪ್ಪಾಜಿ ಬಿಸಲ್ವಾಡಿ ಇದ್ದರು.