ಹುಣಸೂರು ನಗರಠಾಣೆಯಲ್ಲಿ ಗುರುವಾರ ಆಯೋಜಿಸಿದ್ದ ಮತದಾನದ ಅರಿವು ಕಾರ್ಯಕ್ರಮದಲ್ಲಿ ಡಿವೈಎಸ್‌ಪಿ ಗೋಪಾಲಕೃಷ್ಣ ಮಾತನಾಡಿದರು. ಶರ್ಮಿಳಾ, ಚಿಕ್ಕರಾಜ ಶೆಟ್ಟಿ, ಎಲ್.ರೂಪಾ ಇತರರು ಇದ್ದರು.  
ಜಿಲ್ಲೆ

ಪೊಲೀಸ್ ಸಿಬ್ಬಂದಿಗೆ ಕಡ್ಡಾಯ ಮತದಾನ ಪ್ರತಿಜ್ಞಾ ವಿಧಿ ಬೋಧನೆ

ಹುಣಸೂರು: ಲೋಕಸಭೆ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಮತ ಚಲಾಯಿಸುವಂತೆ ನೋಡಿಕೊಳ್ಳುವುದು ಎಲ್ಲರ ಕರ್ತವ್ಯ ಎಂದು ಡಿವೈಎಸ್‌ಪಿ ಗೋಪಾಲಕೃಷ್ಣ ಹೇಳಿದರು.


ನಗರಸಭೆ ಮತ್ತು ತಾಲೂಕು ಪಂಚಾಯಿತಿ ಸಹಯೋಗದಲ್ಲಿ ಗುರುವಾರ ನಗರ ಪೊಲೀಸ್ ಠಾಣೆ ಸಭಾಂಗಣದಲ್ಲಿ ಕರ್ತವ್ಯನಿರತ ಆರಕ್ಷಕರಿಗಾಗಿ ಆಯೋಜಿಸಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.


ಪೊಲೀಸ್ ಸಿಬ್ಬಂದಿಗೆ ಕಡ್ಡಾಯ ಮತದಾನದ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಗ್ರಾಮಾಂತರ ಠಾಣೆ ಇನ್‌ಸ್ಪೆಕ್ಟರ್ ಚಿಕ್ಕರಾಜಶೆಟ್ಟಿ, ನಗರ ಠಾಣೆ ಇನ್‌ಸ್ಪೆಕ್ಟರ್ ಸಂತೋಷ್ ಕಶ್ಯಪ್, ನಗರಸಭೆ ಎಇಇ ರೂಪಾ, ಶರ್ಮಿಳಾ, ಸ್ವೀಪ್ ನೋಡಲ್ ಇಂಜಿನಿಯರ್ ಸೋಮಸುಂದರ್, ಸಂತೋಷ್, ನಗರಸಭೆ ಆರೋಗ್ಯ ನಿರೀಕ್ಷಕರಾದ ಸತೀಶ್, ಶಶಿ, ತಾಲೂಕು ಪಂಚಾಯಿತಿ ಸಿಬ್ಬಂದಿ ಹೇಮಂತ್, ಪುಷ್ಪಾ ಇತರರು ಇದ್ದರು.