ಜಿಲ್ಲೆ

ಕಾಂಗ್ರೆಸ್ ಹಿಂದು ವಿರೋಧಿ ನೀತಿ ಸಾಬೀತು-ರೂಪಾಲಿ ನಾಯ್ಕ

Uttara Kannada - Subash Hegde


ಕುಮಟಾ: ಮಂಡ್ಯದಲ್ಲಿ ಕೇಸರಿ ಧ್ವಜವನ್ನು ಕೆಳಗಿಳಿಸುವ ಮೂಲಕ ಬಿಜೆಪಿಯು ಕಾಂಗ್ರೆಸ್‌ನ ಹಿಂದು ವಿರೋಧಿ ನೀತಿಯನ್ನು ಮತ್ತೊಮ್ಮೆ ಸಾಬೀತು ಮಾಡಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಹೇಳಿದರು.

ಮಂಡ್ಯ ಜಿಲ್ಲೆಯ ಕೆರಗೋಡಿನಲ್ಲಿ ಹನುಮ ಧ್ವಜವನ್ನು ಇಳಿಸಿದ ಸರ್ಕಾರದ ಕ್ರಮವನ್ನು ಖಂಡಿಸಿ ಕುಮಟಾ ತಾಲೂಕು ಕಚೇರಿಯ ಎದುರು ಬಿಜೆಪಿ ಸೋಮವಾರ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಕೆರಗೋಡಿನಲ್ಲಿ ಜನರೇ ನಿರ್ಮಿಸಿದ ಧ್ವಜದ ಕಟ್ಟೆಯ ಮೇಲೆ ಹನುಮ ಧ್ವಜ ಹಾರಿಸಿದ್ದರು. ಕಾಂಗ್ರೆಸ್ ಸರ್ಕಾರ ಅದನ್ನು ಅದನ್ನು ಕೆಳಗಿಸಿ ಹಿಂದು ವಿರೋಧಿ ನೀತಿ ಅನುಸರಿಸಿದೆ. ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದರು.

ತಹಸೀಲ್ದಾರ್ ಕಚೇರಿಯ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಪ್ರಮುಖರು ಘೋಷಣೆಗಳನ್ನು ಕೂಗಿದರು.

ಶಾಸಕ ದಿನಕರ ಶೆಟ್ಟಿ, ಪಕ್ಷದ ನೂತನ ಜಿಲ್ಲಾಧ್ಯಕ್ಷ ಎನ್‌.ಎಸ್‌.ಹೆಗಡೆ, ಜಿಲ್ಲಾ ಪ್ರಧಾನ ಕಾರ್ಯದಲ್ಲಿ ಗುರುಪ್ರಸಾದ ಹೆಗಡೆ, ಕೆ.ಜಿ.ನಾಯ್ಕ, ಚಂದ್ರು ಎಸೆಳೆ, ಗಜಾನನ ಗುನಗಾ ಇತರರು ಇದ್ದರು.