ಜಿಲ್ಲೆ

ಸಂಕ್ರಾಂತಿ ಹಬ್ಬದಂದು ಕಿಚ್ಚು ಹಾಯಿಸುವ ವೇಳೆ ಬೆಂಕಿ ಹೊತ್ತಿಕೊಂಡಿದ್ದ ಮಂಡ್ಯ ತಾಲೂಕಿನ ಚಿಕ್ಕಬಳ್ಳಿ ಗ್ರಾಮದ ವ್ಯಕ್ತಿ ಸಾವು

ಮಂಡ್ಯ: ಸಂಕ್ರಾಂತಿ ಹಬ್ಬದ ದಿನ ದನಗಳ ಕಿಚ್ಚು ಹಾಯಿಸುವ ವೇಳೆ ನಡೆದಿದ್ದ ಅವಘಡದಲ್ಲಿ ಹಸುಗಳೊಂದಿಗೆ ಕಿಚ್ಚು ಹಾಯಿಸುವಾಗ ಬೆಂಕಿ ತಗುಲಿ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ.

ಮಂಡ್ಯ ತಾಲೂಕಿನ ಚಿಕ್ಕಬಳ್ಳಿಯ ರವಿ (35) ಚಿಕಿತ್ಸೆ ಫಲಕಾರಿಯಾಗದೆ ಸಾವು. ಸಂಕ್ರಾಂತಿ ಹಬ್ಬದಂದು ಕಿಚ್ಚು ಹಾಯಿಸುವ ವೇಳೆ ರವಿಗೆ ಬೆಂಕಿ ಹೊತ್ತಿಕೊಂಡಿತ್ತು.

ನಂತರ ಬೆಂಕಿಯನ್ನು ಹಾರಿಸಿದ್ದ ಗ್ರಾಮಸ್ಥರು. ಶೇ.80ರಷ್ಟು ಸುಟ್ಟಗಾಯದಿಂದ ಬಳಲುತ್ತಿದ್ದ ರವಿಯನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ರವಿ ಮೃತಪಟ್ಟಿದ್ದಾನೆ.