ಜಿಲ್ಲೆ

ಹಾಸ್ಟೆಲ್ ಕೊಠಡಿಯನ್ನು ಸ್ವಚ್ಚವಾಗಿಟ್ಟುಕೊಳ್ಳಿ: ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್ ಸೂಚನೆ

ಮಂಡ್ಯ: ನಗರದಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಮಂಗಳವಾರ ರಾತ್ರಿ ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸಿಫ್ ಭೇಟಿ ನೀಡಿ ಪರಿಶೀಲಿಸಿದರು.

ಹಾಸ್ಟೆಲ್‌ನಲ್ಲಿ ಮೆನು ಚಾರ್ಟ್ ಪ್ರಕಾರದಂತೆ ಗುಣಮಟ್ಟದ ಆಹಾರ ನೀಡುತ್ತಿರುವ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ಪಡೆದುಕೊಂಡರು. ಮಾತ್ರವಲ್ಲದೆ ವಿದ್ಯಾರ್ಥಿಗಳೊಂದಿಗೆ ಸ್ವತಃ ಊಟ ಮಾಡಿ ಗುಣಮಟ್ಟದ ಪರಿಶೀಲಿಸಿದರು. ಜತೆಗೆ ವಿದ್ಯಾರ್ಥಿಗಳ ಬಯೋಮೆಟ್ರಿಕ್ ಹಾಜರಾತಿ ಹಾಗೂ ಗ್ರಂಥಾಲಯಗಳಲ್ಲಿರುವ ಪುಸ್ತಕಗಳನ್ನು ಪರಿಶೀಲನೆ ಮಾಡಿದರು.

ಅಂತೆಯೇ ದಾಸ್ತಾನು ಕೊಠಡಿಗೆ ಭೇಟಿ ನೀಡಿ ಆಹಾರ ಪದಾರ್ಥಗಳ ಗುಣಮಟ್ಟ, ಸೋಲಾರ್ ಮತ್ತು ಕಂಪ್ಯೂಟರ್, ಯುಪಿಎಸ್ ವೀಕ್ಷಿಸಿ ಕೊರತೆ ಇರುವ ಸೋಲಾರ್ ಹಾಗೂ ಕಂಪ್ಯೂಟರ್‌ಗಳ ಪಟ್ಟಿಯನ್ನು ಕಳುಹಿಸಿಕೊಡಬೇಕು. ಅಂಎಯೇ ವಿದ್ಯಾರ್ಥಿನಿಲಯವನ್ನು ಸ್ವಚ್ಚವಾಗಿಟ್ಟು ಕೊಳ್ಳುವಂತೆ ಸೂಚನೆ ನೀಡಿದರು. ಮಾತ್ರವಲ್ಲದೆ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡಿ ವಿವಿಧ ಹುದ್ದೆಯನ್ನು ಪಡೆದಿರುವ ಹಳೆ ವಿದ್ಯಾರ್ಥಿಗಳ ಪಟ್ಟಿಯನ್ನು ನಾಮಫಲಕದಲ್ಲಿ ಹಾಕಲು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಡಾ.ಸಿದ್ದಲಿಂಗೇಶ್, ಹಿಂದುಗಳ ವರ್ಗಗಳ ಕಲ್ಯಾಣಾಧಿಕಾರಿ ಶ್ರೀನಿವಾಸ್, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಕಾವ್ಯಶ್ರೀ ಇತರರಿದ್ದರು.