ganja seized 
ಮಂಡ್ಯ

100 ಕೆಜಿ ಗಾಂಜಾ ಪೊಲೀಸರ ವಶಕ್ಕೆ

ಪ್ರಮುಖ ಮುಖ್ಯಾಂಶಗಳು

  • ganja seized
ಮದ್ದೂರು: ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ಸುಮಾರು 100 ಕೆಜಿ ಗಾಂಜಾ ಹಾಗೂ ವ್ಯಕ್ತಿಯೊಬ್ಬನನ್ನು ಪೊಲೀಸರು ಬುಧವಾರ ರಾತ್ರಿ ವಶ ಪಡಿಸಿಕೊಂಡಿದ್ದಾರೆ.
ಒಡಿಶಾದಿಂದ ಮಂಡ್ಯ ಜಿಲ್ಲೆಗೆ ಕಾರಿನಲ್ಲಿ ಗಾಂಜಾ ಸಾಗಿಸಲಾಗುತ್ತಿರುವ ಖಚಿತ ಮಾಹಿತಿ ಮೇರೆಗೆ ಕಾರನ್ನು ಅಡ್ಡಗಟ್ಟಿ ತಪಾಸಣೆ ಮಾಡಿದ ಪೊಲೀಸರಿಗೆ ಗಾಂಜಾ ಸೊಪ್ಪು ಇರುವುದು ಕಂಡು ಬಂದಿದೆ.
ಸ್ಥಳಕ್ಕೆ ಆಗಮಿಸಿದ ಮಳವಳ್ಳಿ ಡಿವೈಎಸ್ಪಿ ಯಶವಂತ್ ಕುಮಾರ್, ಸಿಪಿಐ ನಾರಾಯಣಿ ಹಾಗೂ ಕೆಸ್ತೂರು ಪಿಎಸ್‌ಐ ಹಾಗೂ ಪೊಲೀಸರು ಪರಿಶೀಲನೆ ನಡೆಸಿ ಗಾಂಜಾ ಸಮೇತ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆತನ ಹೆಸರನ್ನು ಬಹಿರಂಗ ಪಡಿಸಿಲ್ಲ. ಗಾಂಜಾ ಸೊಪ್ಪು ಯಾರು, ಎಲ್ಲಿಗೆ ಸಾಗಿಸುತ್ತಿದ್ದರು ಎಂಬ ಬಗ್ಗೆ ತನಿಖೆ ಪೂರ್ಣಗೊಂಡ ಬಳಿಕ ತಿಳಿಯಲಿದೆ. ಈ ಬಗ್ಗೆ ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.