ಕಿಕ್ಕೇರಿ ಹೋಬಳಿಯ ಮಾದಾಪುರ ಕೊಪ್ಪಲು ಗ್ರಾಮದಲ್ಲಿ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ ಅಂಗವಾಗಿ ಬುಧವಾರ ಮುನೇಶ್ವರಸ್ವಾಮಿ ದೇವರಿಗೆ ಪಂಚಾಮೃತ ಅಭಿಷೇಕ ನೆರವೇರಿಸಲಾಯಿತು.
- ಡಿಕೆಸಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆ
ಕಿಕ್ಕೇರಿ: ಹೋಬಳಿಯ ಮಾದಾಪುರ ಕೊಪ್ಪಲು ಗ್ರಾಮದಲ್ಲಿ ಮುನೇಶ್ವರಸ್ವಾಮಿ ದೇವರಿಗೆ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಬುಧವಾರ ಕಾಂಗ್ರೆಸ್ ಮುಖಂಡ ಎಂ.ಕೆ.ರಾಮಕೃಷ್ಣೇಗೌಡ ಪಂಚಾಮೃತ ಅಭಿಷೇಕ ನೆರವೇರಿಸಿದರು.
ಮುನೇಶ್ವರಸ್ವಾಮಿ ದೇವರ ಅರ್ಚಕನಾಗಿ ದೇವರಲ್ಲಿ ಪ್ರಾರ್ಥಿಸಲಾಗಿದೆ. ಡಿ.ಕೆ.ಶಿವಕುಮಾರ್ ಸುಭದ್ರವಾಗಿ ಸರ್ಕಾರ ನಡೆಸಲಿ. 30ವರ್ಷಗಳ ಕಾಲ ತಪಸ್ಸಿನಂತೆ ಕಾಂಗ್ರೆಸ್ ಪಕ್ಷದಲ್ಲಿ ದುಡಿದಿದ್ದಾರೆ. ಎಲ್ಲ ರೀತಿಯ ನೋವನ್ನು ಅನುಭವಿಸಿದ್ದಾರೆ. ಇವರ ಅವಧಿಯಲ್ಲಿ ಮಳೆ, ಬೆಳೆ ಸಮೃದ್ಧಿಯಾಗಿ ಲಭಿಸಲಿ. ಪಕ್ಷ, ಕಾರ್ಯಕರ್ತರ ಸಂಘಟನೆ ಶಕ್ತಿ ಸಿಗಲಿ ಎಂದು ಪ್ರಾರ್ಥಿಸಲಾಗಿದೆ ಎಂದರು.