ಮದ್ದೂರು ತಾಲೂಕಿನ ಸೊಳ್ಳೆಪುರ ಗ್ರಾಮದಲ್ಲಿ ಕಬ್ಬಿನ ಗದ್ದೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಸುಮಾರು 2 ಎಕರೆ ಕಬ್ಬು ಸುಟ್ಟಿರುವುದು.
ಮದ್ದೂರು: ತಾಲೂಕಿನ ಸೊಳ್ಳೆಪುರ ಗ್ರಾಮದಲ್ಲಿ ಕಬ್ಬಿನ ಗದ್ದೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಸುಮಾರು 2 ಎಕರೆ ಕಬ್ಬು ಸುಟ್ಟು ರೈತನಿಗೆ ಅಂದಾಜು 4 ಲಕ್ಷ ರೂ.ನಷ್ಟ ಉಂಟಾಗಿದೆ.
ಗ್ರಾಮದ ನಿಂಗೇಗೌಡ ಎಂಬುವರ ಕಬ್ಬಿನ ಗದ್ದೆಗೆ ಬುಧವಾರ ರಾತ್ರಿ 9 ಗಂಟೆ ಸಮಯದಲ್ಲಿ ಬೆಂಕಿ ತಗುಲಿ ಅಪಾರ ನಷ್ಟವಾಗಿದೆ. ವಿಷಯ ತಿಳಿದು ಅಗ್ನಿಶಾಮಕ ಠಾಣೆಗೆ ದೂರು ಕೊಟ್ಟಿದ್ದು, ಅಗ್ನಿಶಾಮಕ ಠಾಣೆ ಸಿಬ್ಬಂದಿ ಬರುವಷ್ಟರಲ್ಲಿ ಗ್ರಾಮಸ್ಥರೆಲ್ಲ ಸೇರಿಕೊಂಡು ಬೆಂಕಿ ಹಾರಿಸಲು ಸಾಹಸ ಮಾಡಿ ಅಗ್ನಿಶಾಮಕ ವಾಹನ ಬರುವುದರೊಳಗೆ ಬೆಂಕಿ ನಂದಿಸಲಾಗಿತ್ತು.
ಘಟನೆಯಿಂದ ಆರ್ಥಿಕ ನಷ್ಟ ಉಂಟಾಗಿದ್ದು, ರೈತನಿಗೆ ಸರ್ಕಾರ ಸೂಕ್ತ ಪರಿಹಾರ ಕೊಡುವಂತೆ ಹಾಗೂ ಕಬ್ಬುನ್ನು ತಾಲೂಕಿನ ಚಾಮುಂಡೇಶ್ವರಿ ಶುಗರ್ ಅಥವಾ ಎನ್‌ಎಸ್‌ಎಲ್ ಕಾರ್ಖಾನೆಗೆ ಕಬ್ಬು ಸರಬರಾಜು ಮಾಡಲು ಕ್ರಮ ಕೈಗೊಳ್ಳುವಂತೆ ರೈತ ಮುಖಂಡ ಸೊ.ಶಿ.ಪ್ರಕಾಶ್ ಒತ್ತಾಯಿಸಿದ್ದಾರೆ.