ಮದ್ದೂರು ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ, ಪ್ರಾಥಮಿಕ ಮಾಧ್ಯಮಿಕ ಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಶಿಕ್ಷಕರನ್ನು ಅಭಿನಂದಿಸಲಾಯಿತು. ಶಿವಣ್ಣ, ಕೆ.ಟಿ.ಶಿವಕುಮಾರ್, ಬಿ.ವಿ.ಹಳ್ಳಿ ನಾರಾಯಣ್ ಸೇರಿದಂತೆ ಇತರರು ಹಾಜರಿದ್ದರು.
- ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ಪ್ರಾಥಮಿಕ ಮಾಧ್ಯಮಿಕ ಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಶಿವಣ್ಣ ಭರವಸೆ
- ನಿವೃತ್ತಿ ಹೊಂದಿದ ಶಿಕ್ಷಕರಿಗೆ ಸನ್ಮಾನ
ಮದ್ದೂರು: ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ, ಪ್ರಾಥಮಿಕ ಮಾಧ್ಯಮಿಕ ಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಪುನಶ್ಚೇತನ ಸಭೆ ಹಾಗೂ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಶಿಕ್ಷಕರಿಗೆ ಸನ್ಮಾನ ಸಮಾರಂಭವನ್ನು ಶುಕ್ರವಾರ ಆಯೋಜಿಸಲಾಗಿತ್ತು.
ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ಪ್ರಾಥಮಿಕ ಮಾಧ್ಯಮಿಕ ಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಶಿವಣ್ಣ ಮಾತನಾಡಿ, ಮದ್ದೂರು ತಾಲೂಕಿನಲ್ಲಿ ಸಂಘವು ಅಸ್ತಿತ್ವಕ್ಕೆ ಬಂದಿದ್ದು, ಮುಂದಿನ ದಿನಗಳಲ್ಲಿ ತಾಲೂಕಿನ ನೌಕರರ ಸಮಸ್ಯೆಗಳನ್ನು ಪರಿಹರಿಸಲು ಗಮನಹರಿಸಲಾಗುವುದು ಹಾಗೂ ಸಂಘಕ್ಕೆ ಸದಸ್ಯರನ್ನು ನೋಂದಣಿ ಮಾಡಿಕೊಳ್ಳುವುದರ ಮೂಲಕ ನಾವೆಲ್ಲರೂ ಸಂಘಟಿತರಾಗಿ ಸಮಾಜದ ಏಳಿಗೆಗೆ ಶ್ರಮಿಸಬೇಕು ಎಂದು ಹೇಳಿದರು.
ಸಮಾರಂಭದಲ್ಲಿ ಸೇವೆಯಿಂದ ನಿವೃತ್ತಿ ಹೊಂದಿದ ಶಿಕ್ಷಕರಾದ ಶಿವಣ್ಣ, ಶಿವಲಿಂಗಯ್ಯ, ಮರಿಸ್ವಾಮಿ, ಅದಿಯಪ್ಪ ಅವರನ್ನು ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಸಹ ಕಾರ್ಯದರ್ಶಿ ಪ್ರಸನ್ನ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕ ರಮೇಶ್, ದಲಿತ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಟಿ.ಶಿವಕುಮಾರ್, ಸಾಹಿತಿ ಬಿ.ವಿ.ಹಳ್ಳಿ ನಾರಾಯಣ್, ಶಿಕ್ಷಕರಾದ ಡಾ.ಮಲ್ಲೀಕೇಶ್, ಮಹೇಶ್, ದೊಡ್ಡಯ್ಯ , ವೆಂಕಟೇಶ್ ಪ್ರಸಾದ್ ಲೋಕೇಶ್, ಶೋಭಾ, ಕಮಲಾದೇವಿ ,ಜಯಾವತಿ, ಸೋಮಶೇಖರ್, ಉಮೇಶ್, ಮುತ್ತು ರಾಜ್,ಕೆ ಜೆ ಗೋವಿಂದ ರಾಜ್, ನಾಗರಾಜ್, ಮೋಹನ್ ಇತರರು ಇದ್ದರು.