ಮಳವಳ್ಳಿಯ ಶಾಂತಿ ಪದವಿ ಪೂರ್ವ ಕಾಲೇಜಿನ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವನ್ನು ಜಾನಪದ ಕಲಾವಿದ ನಗೆಮಳೆರಾಜ ಚಂದ್ರಾಜ್ ಉದ್ಘಾಟಿಸಿದರು. ಎಚ್.ಎಂ. ಮಹದೇವಸ್ವಾಮಿ, ಎಂ.ಎಚ್. ಕೆಂಪಯ್ಯ ಇತರರು ಇದ್ದರು.
ಮಳವಳ್ಳಿ: ಪಟ್ಟಣದ ಶಾಂತಿ ಪದವಿ ಪೂರ್ವ ಕಾಲೇಜಿನ 2026-27ನೇ ಸಾಲಿನ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಗುರುವಾರ ಶಾಂತಿ ಭವನದಲ್ಲಿ ಜರುಗಿತು.
ಕಾರ್ಯಕ್ರಮವನ್ನು ಜಾನಪದ ಕಲಾವಿದ ಹಾಗೂ ಉಪನ್ಯಾಸಕ ನಗೆಮಳೆರಾಜ ಚಂದ್ರಾಜ್ ಉದ್ಘಾಟಿಸಿ ಮಾತನಾಡಿ, ಶಿಕ್ಷಣದ ಜತೆಗೆ ಕ್ರೀಡೆ ಮತ್ತು ಕಲೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಅತ್ಯಗತ್ಯ ಎಂದರು
ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಪ್ರಸನ್ನ ಕುಮಾರ್ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ, ಪ್ರೋತ್ಸಾಹಿಸಿದರು.
ಪ್ರಾಂಶುಪಾಲ ಎಂ.ಸಿ. ಶಿವಪ್ಪ ಮಾತನಾಡಿದರು. ಕಿರುತೆರೆ ನಟ, ಕಾಲೇಜಿನ ಹಿರಿಯ ವಿದ್ಯಾರ್ಥಿ ಪುನೀತ್‌ಕುಮಾರ್ ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದರು.
ಶಾಂತಿ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಎಚ್.ಎಂ. ಮಹದೇವಸ್ವಾಮಿ, ಕಾರ್ಯದರ್ಶಿ ಎಂ.ಎಚ್. ಕೆಂಪಯ್ಯ, ಸಹ ಕಾರ್ಯದರ್ಶಿ ಎಚ್.ತಿಮ್ಮೇಗೌಡ, ಖಜಾಂಜಿ ಕೆ.ಸಿ. ಪುಟೀರೇಗೌಡ, ಆಡಳಿತ ಮಂಡಳಿ ಸದಸ್ಯ ಎಂ.ಸಿ.ಕೃಷ್ಣ, ಶಾಂತಿ ಸೇವಾ ಟ್ರಸ್ಟ್ ಕಾರ್ಯದರ್ಶಿ ಪುಟ್ಟರಾಜು, ಶಾಂತಿ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಸಿ.ಎಂ. ನಾಗರಾಜು ಸೇರಿದಂತೆ ಆಡಳಿತ ಮಂಡಳಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು.