ಹನುಮಂತನಗರದ ಭಾರತೀ ವಸತಿ ಸಂಯುಕ್ತ ಶಾಲೆ ಮತ್ತು ಪದವಿ ಪೂರ್ವ ಕಾಲೇಜಿನನಲ್ಲಿ ಡಾ.ರಾವ್ಸ್ ಅಕಾಡೆಮಿ ಆಶ್ರಯದಲ್ಲಿ ಏರ್ಪಡಿಸಿದ್ದ ವಿಶ್ವ ಪರಿಸರ ದಿನಾಚರಣೆಯಲ್ಲಿ ವಿಧಾನ ಪರಿಷತ್ ಸದಸ್ಯ, ಭಾರತೀ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮಧು ಜಿ.ಮಾದೇಗೌಡ ಮಾತನಾಡಿದರು. 
ಮಂಡ್ಯ

ಗಿಡ ನೆಡುವ ಜತೆಗೆ ಮರಗಳನ್ನೂ ಕಾಪಾಡಿ

ಕಿರಣ್ ಗೌಡ.ಜಿ

ಪ್ರಮುಖ ಮುಖ್ಯಾಂಶಗಳು

  • ವಿದ್ಯಾರ್ಥಿಗಳಿಗೆ ಮಧು ಜಿ.ಮಾದೇಗೌಡ ಸಲಹೆ
  • ಡಾ. ರಾವ್ಸ್ ಅಕಾಡೆಮಿಯಿಂದ ಪರಿಸರ ದಿನಾಚರಣೆ
ಕೆ.ಎಂ.ದೊಡ್ಡಿ: ಪರಿಸರ ಮಾಲಿನ್ಯ ಹೆಚ್ಚಾದಂತೆ ಮನುಷ್ಯ ಸೇರಿದಂತೆ ಭೂಮಿ ಮೇಲಿನ ಪ್ರತಿಯೊಂದು ಜೀವಿಗಳ ಆರೋಗ್ಯದ ಮೇಲೂ ಕೆಟ್ಟ ಪರಿಣಾಮ ಉಂಟಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ, ಭಾರತೀ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮಧು ಜಿ.ಮಾದೇಗೌಡ ಎಚ್ಚರಿಕೆ ನೀಡಿದರು.
ಸಮೀಪದ ಹನುಮಂತನಗರದ ಭಾರತೀ ವಸತಿ ಸಂಯುಕ್ತ ಶಾಲೆ ಮತ್ತು ಪದವಿ ಪೂರ್ವ ಕಾಲೇಜಿನನಲ್ಲಿ ಡಾ.ರಾವ್ಸ್ ಅಕಾಡೆಮಿ ಆಶ್ರಯದಲ್ಲಿ ಏರ್ಪಡಿಸಿದ್ದ ವಿಶ್ವ ಪರಿಸರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ. ವಿದ್ಯಾರ್ಥಿಗಳು ಹೆಚ್ಚಾಗಿ ಪರಿಸರದ ಬಗ್ಗೆ ಕಾಳಜಿ ವಹಿಸಬೇಕು. ಗಿಡ ನೆಡುವ ಜತೆಗೆ ಮರಗಳನ್ನು ಕಾಪಾಡುವ ಮನೋಧರ್ಮ ಬೆಳೆಸಿಕೊಳ್ಳಬೇಕು ಎಂದರು.
ನಾವೆಲ್ಲರೂ ಮರಗಳನ್ನು ಕಡಿದು ಪರಿಸರವನ್ನು ನಾಶ ಮಾಡುತ್ತಿರುವುದರಿಂದ ಮಳೆ ಪ್ರಮಾಣ ಕಡಿಮೆಯಾಗಿದೆ. ಅಲ್ಲದೆ ಮಾಲಿನ್ಯ ಹೆಚ್ಚಾಗಿದೆ, ಮಳೆ ಇಲ್ಲದೆ ಯಾವುದೇ ಬೆಳೆ ಇಲ್ಲ ಎಂಬುದನ್ನು ಅರಿಯಬೇಕು. ಕಾಡು ಉಳಿಸಿದರೆ ನಾಡು ಉಳಿಯುತ್ತದೆ ಎಂದು ಕಿವಿಮಾತು ಹೇಳಿದರು.
ಭಾರತೀ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪುಟ್ಟಸ್ವಾಮಿ ಮಾತನಾಡಿ, ಪರಿಸರ ಸಮತೋಲನ ಕಾಪಾಡುವುದು ಇಂದು ಅಗತ್ಯವಾಗಿದೆ. ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಿ ಪರಿಸರ ಸ್ನೇಹಿ ಜೀವನ ಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಕಾರ್ಯದರ್ಶಿ ಸಿದ್ದೇಗೌಡ ಬಹುಮಾನ ವಿತರಿಸಿದರು. ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರಶಂಸಿಸಿ ಪರಿಸರ ಜಾಗೃತಿ ಕಾರ್ಯಕ್ರಮದ ಬಗ್ಗೆ ಪ್ರೋತ್ಸಾಹಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಡೀನ್ ನಂದಾ ಯಲಮಾಲಿ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಉಪಸ್ಥಿತರಿದ್ದರು.