ಅಂಕೇಗೌಡ ಅವರಿಗೆ ಮಂಡ್ಯದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಗೌರವ ಪತ್ರ ಹಸ್ತಾಂತರ ಮಾಡಿದರು.
- ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಘೋಷಣೆ ಮಾಡಿರುವ ಕೇಂದ್ರ ಸರ್ಕಾರ
- ಮೇ 25ರಂದು ನವದೆಹಲಿಯಲ್ಲಿ ಪ್ರದಾನ ಸಮಾರಂಭ
ಮಂಡ್ಯ: ಪದ್ಮಶ್ರೀ ಪ್ರಶಸ್ತಿ ಪಡೆದ ಪಾಂಡವಪುರ ತಾಲೂಕು ಹರಳಹಳ್ಳಿ ಗ್ರಾಮದ ಪುಸ್ತಕ ಮನೆ ಅಂಕೇಗೌಡ ಅವರಿಗೆ ಜಿಲ್ಲಾಡಳಿತದಿಂದ ಮಂಗಳವಾರ ಗೌರವ ಪತ್ರ ಹಸ್ತಾಂತರ ಮಾಡಲಾಯಿತು.
ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಅಸಾಧಾರಣ ಸೇವೆ ಪರಿಗಣಿಸಿರುವ ಕೇಂದ್ರ ಸರ್ಕಾರ, ಅಂಕೇಗೌಡ ಅವರಿಗೆ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಘೋಷಣೆ ಮಾಡಿದೆ. ಈ ಸಂಬಂಧ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮೇ 25ರಂದು ಆಯೋಜಿಸಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಅಂಕೇಗೌಡ ಅವರಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಗೌರವ ಪತ್ರವನ್ನು ಹಸ್ತಾಂತರಿಸಿದರು.
ಅಂತೆಯೇ ನವದೆಹಲಿಗೆ ಪ್ರಯಾಣದ ಸಂದರ್ಭದಲ್ಲಿ ಅವರಿಗೆ ತೊಂದರೆ ಆಗದಂತೆ ಸಹಾಯಕರನ್ನು ಕಳುಹಿಸುವ ವ್ಯವಸ್ಥೆ ಮಾಡಿದ್ದಾರೆ.