ಮದ್ದೂರು ತಾಲೂಕಿನ ಅಜ್ಜಹಳ್ಳಿ ಗ್ರಾಮದ ಶಿಂಷಾ ನದಿ ಪಾತ್ರದಲ್ಲಿ ಅನಧಿಕೃತ ಮರಳುಗಾರಿಕೆ ಮಾಡುತ್ತಿದ್ದ ಅಡ್ಡೆಯ ಮೇಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ದಾಳಿ ಮಾಡಿ ಪರಿಶೀಲಿಸಿದರು. ಮಹೇಶ್, ರಾಜೇಶ, ಮಮತಾ ಇದ್ದರು.  
ಮಂಡ್ಯ

ಮರಳುಗಾರಿಕೆ ಅಡ್ಡೆ ಮೇಲೆ ದಾಳಿ

ಕಿರಣ್ ಗೌಡ.ಜಿ

ಪ್ರಮುಖ ಮುಖ್ಯಾಂಶಗಳು

  • ಗಣಿ ಮತ್ತು ಭೂ ವಿಜ್ಞಾನ, ಕಂದಾಯ ಇಲಾಖೆ ಅಧಿಕಾರಿಗಳಿಂದ ಕಾರ್ಯಾಚರಣೆ
ಮದ್ದೂರು: ತಾಲೂಕಿನ ಅಜ್ಜಹಳ್ಳಿ ಮತ್ತು ಹುಲಿಕೆರೆ ಗ್ರಾಮಗಳ ಶಿಂಷಾ ನದಿ ಪಾತ್ರದಲ್ಲಿ ಅನಧಿಕೃತ ಮರಳುಗಾರಿಕೆ ಅಡ್ಡೆ ಮೇಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಗುರುವಾರ ದಾಳಿ ಮಾಡಿ ಪರಿಶೀಲಿಸಿದರು.
ಸದರಿ ಜಾಗಗಳಲ್ಲಿ ಸುಮಾರು 50 ಎಂಟಿ ಪ್ರಮಾಣದ 35 ಸಾವಿರ ಮೌಲ್ಯದ ಮರಳನ್ನು ವಶಕ್ಕೆ ಪಡೆದಿದ್ದಾರೆ ಹಾಗೂ ಮರಳುಗಾರಿಕೆ ನಡೆಸುತ್ತಿರುವವರ ವಿರುದ್ಧ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಲಾಗುವುದೆಂದು ಭೂ ವಿಜ್ಞಾನಿ ಮಹೇಶ ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಕಂದಾಯ ನಿರೀಕ್ಷಕ ರಾಜೇಶ, ಗ್ರಾಮ ಆಡಳಿತಾಧಿಕಾರಿಗಳಾದ ಮಮತಾ ಮತ್ತು ಆಂಜನಪ್ಪ ಇದ್ದರು.