ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ  
ಮಂಡ್ಯ

ಕ್ರಿಮಿನಲ್ ಕೇಸ್ ಹಾಕಲು ಸೂಚನೆ: ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಮಾಹಿತಿ

ಕೆ.ಎನ್.ರಾಘವೇಂದ್ರ

ಪ್ರಮುಖ ಮುಖ್ಯಾಂಶಗಳು

  • ಬಗರ್‌ಹುಕುಂ ಯೋಜನೆಯಲ್ಲಿ ಭ್ರಷ್ಟಾಚಾರ
  • ಲೋಕಾಯುಕ್ತ ಪೊಲೀಸರ ದಾಳಿ
  • ಕ್ರಿಮಿನಲ್ ಕೇಸ್ ದಾಖಲು ಮಾಡಿ
ಮಂಡ್ಯ: ನಾಗಮಂಗಲ ತಾಲೂಕು ಕಚೇರಿಯಲ್ಲಿ ಬಗರ್‌ಹುಕುಂ ಯೋಜನೆಯಡಿ ನಡೆಸಿರುವ ಭಾರೀ ಅಕ್ರಮದ ಹಿಂದೆ ಅಧಿಕಾರ ಮತ್ತು ಅಧಿಕಾರೇತರರು ಶಾಮೀಲಾಗಿದ್ದಾರೆ. ಆದ್ದರಿಂದ ಇದರಲ್ಲಿ ತಹಸೀಲ್ದಾರರೇ ಆಗಿರಲಿ, ಇನ್ನಾವುದೇ ಕೆಳಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರೂ ಕ್ರಿಮಿನಲ್ ಪ್ರಕರಣ ದಾಖಲಿಸುಂತೆ ಜಿಲ್ಲಾಧಿಕಾರಿಗೆ ಈಗಾಗಲೇ ಸೂಚನೆ ನೀಡಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ಈ ಅಕ್ರಮದ ಬಗ್ಗೆ ನನಗೆ ಮಾಹಿತಿ ನೀಡಿದವರೇ ಲೋಕಾಯುಕ್ತರಿಗೂ ದೂರು ನೀಡಿದ್ದಾರೆ. ಅದರಂತೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸಿ, ಕೆಲವು ಅಧಿಕಾರಿಗಳ ವಿರುದ್ಧ ಉಪ ಲೋಕಾಯುಕ್ತರು ಸುಮೊಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಭೂಮಿಗಾಗಿ ರೈತರು ಸಲ್ಲಿಸಲಾಗಿದ್ದ ಅರ್ಜಿಯನ್ನು ಅಕ್ರಮ ತಿದ್ದುಪಡಿ ಮಾಡುವ ಮೂಲಕ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿರುವುದು ಕಂಡುಬಂದಿದೆ. ಆದರೆ ಎಲ್ಲ ದಾಖಲೆಗಳು ಸ್ಕ್ಯಾನ್ ಮಾಡಿರುವುದರಿಂದ ಆಸ್ತಿಗಳನ್ನು ರಕ್ಷಣೆ ಮಾಡಬಹುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ತಿಳಿಸಿದ್ದಾರೆ. ಯಾರದೇ ಆಸ್ತಿಗಳು ಬೇರೆಯವರ ಪಾಲಾಗಲು ಬಿಡುವುದಿಲ್ಲ ಎಂದು ತಿಳಿಸಿದರು.
ಎಸಿ ಅವರು 600 ಕಡತವನ್ನು ಸೀಜ್ ಮಾಡಿ ಪರಿಶೀಲನೆ ಮಾಡಲಾಗುತ್ತಿದೆ. ಲೋಕಾಯುಕ್ತರು ಸಹ ದಾಳಿ ಮಾಡಿದ್ದಾರೆ. ಹಿಂದೆ ನಡೆದಿರುವುದನ್ನ ವಶಪಡಿಸಿಕೊಂಡಿದ್ದಾರೆ. ಲೋಕಾಯುಕ್ತ ಎಸ್ಪಿ ಜತೆ ಮಾತನಾಡಿದ್ದೇನೆ. ನಕಲಿ ದಾಖಲೆ ಸೃಷ್ಟಿಸಿದವರ ವಿರುದ್ದ ಸಂಪೂರ್ಣ ಕ್ರಮಕ್ಕೆ ಸೂಚನೆ ಕೊಟ್ಟಿದ್ದೇನೆ. ನಕಲಿ ದಾಖಲೆ ಸೃಷ್ಟಿಸಿದರೂ ರದ್ದಾಗಲಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಎಂದು ಸೂಚನೆ ಕೊಟ್ಟಿದ್ದೇನೆ. ರೆವಿನ್ಯೂ ಇಲಾಖೆಯಲ್ಲಿ ಡಿಜಿಟಲಿಕರಣ ಆಗಿದೆ. ಹಾಗಾಗಿ ಯಾವುದೇ ನಕಲಿ ಆಗಲ್ಲ. ಸಾರ್ವಜನಿಕರ ಆಸ್ತಿ ರಕ್ಷಣೆಗೆ ಸಚಿವ ಕೃಷ್ಣಬೈರೇಗೌಡ ಮಾಡುತ್ತಿದ್ದಾರೆ. ಯಾವುದೇ ಮುಲಾಜಿಲ್ಲದೆ ಅಧಿಕಾರಿಗಳ ವಿರುದ್ಧ ಕ್ರಮವಾಗಲಿದೆ ಎಂದರು.