ಮಂಡ್ಯ ನಗರದಲ್ಲಿ ಆಯೋಜಿಸಿದ್ದ ಭಗೀರಥ ಜಯಂತಿ ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
- ಕರ್ನಾಟಕ ಸಂಘದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಆಚರಣೆ
- ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜನೆ
ಮಂಡ್ಯ: ಪಾಲಕರು ತಮ್ಮ ಮಕ್ಕಳಗೆ ನಮ್ಮ ನಾಡು, ನುಡಿ, ಇತಿಹಾಸ ಕುರಿತು ಹಾಗೂ ಭಗೀರಥರ ಚಿಂತನೆ ಸಾಧನೆಯನ್ನು ತಿಳಿಸುವ ಕೆಲಸ ಮಾಡಬೇಕು. ಅಂತೆಯೇ ಕಠಿಣ ಪರಿಶ್ರಮದಿಂದ ಮಾತ್ರ ಸಾಧನೆ ಮಾಡಲು ಸಾಧ್ಯ ಎಂಬುದನ್ನು ಅರ್ಥೈಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.
ನಗರದ ಕರ್ನಾಟಕ ಸಂಘದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಡೆದ ಆಯೋಜಿಸಿದ್ದ ಭಗೀರಥ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಹಲವು ಬಾರಿ ವಿಫಲವಾದರೂ ಸಹ ಅವಿರತ ಶ್ರಮದಿಂದ ಗಂಗೆಯನ್ನು ಭೂಮಿಗೆ ತಂದು ನೀರಿನ ಬವಣೆಯನ್ನು ನೀಗಿಸುವ ಮೂಲಕ ಸತತ ಪ್ರಯತ್ನಕ್ಕೆ ಭಗೀರಥರು ಶ್ರಮ ಎಂದು ಮನೆ ಮಾತಾಗಿದ್ದಾರೆ. ಆದ್ದರಿಂದ ನೀರನ್ನು ಮಿತವಾಗಿ ಬಳಸಬೇಕು ಜಲ ಸಂರಕ್ಷಣೆ ಮಾಡುವುದು ನಮ್ಮ ಕರ್ತವ್ಯ ಎಂದು ತಿಳಿಸಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥಪಾಲಕ ಡಾ.ಪಿ.ಸಿದ್ದರಾಮು ಅವರು ಭಗೀರಥ ಶ್ರೀಗಳ ಹುಟ್ಟು, ಬೆಳವಣಿಗೆ, ಜೀವನಗಾಥೆಯ ಕುರಿತು ವಿಶೇಷ ಉಪನ್ಯಾಸ ನೀಡಿದರು. ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಚ್ಚಿನ್ ಚಲುವರಾಯಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ವಿ.ನಂದೀಶ್, ಕರ್ನಾಟಕ ಸಂಘದ ಅಧ್ಯಕ್ಷ ಡಾ.ಬಿ.ಜಯಪ್ರಕಾಶಗೌಡ, ಜೈ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ನಾರಾಯಣಗೌಡ, ನಾಗರತ್ನಾ, ಸಂದೇಶ್ ಇತರರಿದ್ದರು.