ಮಳವಳ್ಳಿ ತಾಲೂಕಿನ ಚೋಳನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ತಡರಾತ್ರಿ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟಿದ್ದಾರೆ.
ಮಳವಳ್ಳಿ: ತಾಲೂಕಿನ ಚೋಳನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ತಡರಾತ್ರಿ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟಿದ್ದಾರೆ.
ಚಾಮರಾಜನಗರ ತಾಲೂಕು ಬಿಸಲವಾಡಿ ಗ್ರಾಮದ ರವಿ(23) ಮೃತ. ಈತ ಮನೆ ನಿರ್ಮಾಣದ ಸೆಂಟ್ರಿಂಗ್ ಕೆಲಸ ಮಾಡುವ ಉದ್ಯೋಗ ಮಾಡುತ್ತಿದ್ದು, ಹಾರೋಹಳ್ಳಿ ಬಳಿ ಕೆಲಸ ಮುಗಿಸಿಕೊಂಡು ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಕಾರು ಡಿಕ್ಕಿ ಹೊಡೆದ ಬೈಕ್ ಸವಾರನ ಕಾಲು ತುಂಡಾಗಿ, ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತದೇಹವನ್ನು ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಶವಾಗಾರಕ್ಕೆ ಸ್ಥಳಾಂತರಿಸಿದ್ದರು. ಸೋಮವಾರ ಮರಣೋತ್ತರ ಪರೀಕ್ಷೆಯ ನಂತರ ಕುಟುಂಬದವರಿಗೆ ಮೃತದೇಹ ಒಪ್ಪಿಸಲಾಗಿದೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.