ಕೆ. ಸುರೇಶ್  
ಮಂಡ್ಯ

ಆಯತಪ್ಪಿ ಬಿದ್ದು ಬೈಕ್ ಸವಾರ ಸಾವು

ಮದ್ದೂರು: ದ್ವಿಚಕ್ರ ವಾಹನದಲ್ಲಿ ಆಯತಪ್ಪಿ ಬಿದ್ದು ಶ್ರೀ ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘದ ತಾಲೂಕು ನಿರ್ದೇಶಕ ಕೆ.ಸುರೇಶ್ ಶನಿವಾರ ಮೃತಪಟ್ಟಿದ್ದಾರೆ.
ಕದಲೂರು ಗ್ರಾಮಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಸೋಮನಹಳ್ಳಿ ಅಡಿಗಾಸ್ ಹೋಟೆಲ್ ಬಳಿ ದುರ್ಘಟನೆ ಸಂಭವಿಸಿದೆ. ತಕ್ಷಣ ಸುರೇಶ್ ಅವರನ್ನು ತಾಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ನಿಮ್ಹಾನ್ಸ್‌ಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಮೃತರಿಗೆ ಪತ್ನಿ, ಪುತ್ರ ಇದ್ದಾರೆ. ಈ ಸಂಬಂಧ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಭಾನುವಾರ ಮದ್ದೂರು ನಗರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.