ಮೃತ ಕೆ.ಆರ್.ಮಂಜುನಾಥ್  
ಮಂಡ್ಯ

ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಬೈಕ್ ಸವಾರ ಸಾವು

ಲೋಕೇಶ್ ಮನು. ಡಿ
ಶ್ರೀರಂಗಪಟ್ಟಣ: ಚಾಲನೆ ವೇಳೆ ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಸವಾರ ಮೃತಪಟ್ಟಿದ್ದಾರೆೆ.
ಮಂಡ್ಯ ತಾಲೂಕಿನ ಕಾಳೇನಹಳ್ಳಿ ಗ್ರಾಮದ ರಾಮಲಿಂಗೇಗೌಡರ ಪುತ್ರ ಕೆ.ಆರ್.ಮಂಜುನಾಥ್(28) ಮೃತರು. ಇವರು ಬುಧವಾರ ತಮ್ಮ ಬೈಕ್‌ನಲ್ಲಿ ಕೊಡಿಯಾಲ ಗ್ರಾಮ ಕಡೆಯಿಂದ ಕಾಳೇನಹಳ್ಳಿ ಕಡೆಗೆ ತೆರಳುತ್ತಿದ್ದ ವೇಳೆ ಹುಣಸನಹಳ್ಳಿ ಗ್ರಾಮ ಸಮೀಪದ ರಸ್ತೆ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ನಿಯಂತ್ರಣ ತಪ್ಪಿ ಬೈಕ್ ಡಿಕ್ಕಿಯಾಗಿದೆ. ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆೆ.
ಅರಕೆರೆ ಪೊಲೀಸ್ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡರು.