ಮಳವಳ್ಳಿ ಪಟ್ಟಣದ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಮಂಗಳವಾರ ತಾಲೂಕು ಕಾಂಗ್ರೆಸ್ ಸಮಿತಿ ವತಿಯಿಂದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಜನ್ಮದಿನ ಆಚರಿಸಲಾಯಿತು. ಯುವರಾಜ ನರೇಂದ್ರಸ್ವಾಮಿ, ಸಿ.ಪಿ.ರಾಜು, ದೊಡ್ಡಯ್ಯ, ಡಿ.ಕೃಷ್ಣೇಗೌಡ, ಆರ್. ಎನ್.ವಿಶ್ವಾಸ್, ಲಿಂಗರಾಜು, ದೇವರಾಜು, ಮಹದೇವು, ಶಾಂತರಾಜು, ಶ್ರೀಕಾಂತ್, ಅಂಬರೀಶ್ ಇದ್ದರು.  
ಮಂಡ್ಯ

ಶಾಸಕ ಪಿ.ಎಂ.ನರೇಂದ್ರಸ್ವಾಮಿ ಹುಟ್ಟುಹಬ್ಬ

ಮಳವಳ್ಳಿ: ತಾಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಂಗಳವಾರ ಪಟ್ಟಣದ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಾಗೂ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಹುಟ್ಟುಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಸಲಾಯಿತು.
ಪಟ್ಟಣ ಕೋಟೆ ಬೀದಿಯ ಶ್ರೀ ಗಂಗಾಧರೇಶ್ವರ ಸ್ವಾಮಿ ದೇವಾಲಯಕ್ಕೆ ಆಗಮಿಸಿದ ಕಾಂಗ್ರೆಸ್ ಮುಖಂಡರು, ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಪಟ್ಟಣದ ಹೊರವಲಯದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೂಜೆಯಲ್ಲಿ ಶಾಸಕ ಪಿ.ಎಂ.ಎನ್ ಪುತ್ರ ಯುವರಾಜ್ ಪಾಲ್ಗೊಂಡಿದ್ದರು. ನಂತರ ದೇವಸ್ಥಾನದ ಆವರಣದಲ್ಲಿ ಸಿದ್ಧಪಡಿಸಲಾಗಿದ್ದ ವೇದಿಕೆ ಕಾರ್ಯಕ್ರಮದಲಲ್ಲಿ ಕೇಕ್ ಕತ್ತರಿಸಲಾಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪಿ.ರಾಜು ಮಾತನಾಡಿ, ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿರುವ ನಮ್ಮೆಲ್ಲರ ನೆಚ್ಚಿನ ನಾಯಕರಾದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಜನ್ಮದಿನವನ್ನು ಬ್ಲಾಕ್ ಕಾಂಗ್ರೆಸ್ ವತಿಯಿಂದ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸುವುದರ ಜತೆಗೆ ಕೇಕ್ ಕತ್ತರಿಸಿ, ಪರಸ್ಪರ ಸಿಹಿ ಹಂಚುವ ಮೂಲಕ ಸರಳವಾಗಿ ಆಚರಿಸಲಾಯಿತು. ನರೇಂದ್ರಸ್ವಾಮಿ ಹಾಗೂ ಅವರ ಕುಟುಂಬಕ್ಕೆ ದೇವರು ಆರೋಗ್ಯ, ಸುಖ, ನೆಮ್ಮದಿ ನೀಡಿ ಕಾಪಾಡಲಿ ಎಂದು ಪ್ರಾರ್ಥಿಸಿದರು. ನಂತರ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ತೆರಳಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.
ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೊಡ್ಡಯ್ಯ, ಮನ್‌ಮುಲ್ ನಿರ್ದೇಶಕರಾದ ಡಿ.ಕೃಷ್ಣೇಗೌಡ, ಆರ್.ಎನ್.ವಿಶ್ವಾಸ್, ಟಿಎಪಿಸಿ ಎಂಎಸ್ ಅಧ್ಯಕ್ಷ ಲಿಂಗರಾಜು, ಮಾಜಿ ಅಧ್ಯಕ್ಷ ದೇವರಾಜು, ಮುಖಂಡರಾದ ಮಹದೇವು, ಶಾಂತರಾಜು, ಶಿಲ್ಪಾ, ಸವಿತಾ, ಸುಷ್ಮಾರಾಜು, ಶ್ರೀಕಾಂತ್, ಮುಟ್ಟನಹಳ್ಳಿ ಅಂಬರೀಶ್, ಸಂತೋಷ್, ಎಂ.ಪಿ.ಶಿವಕುಮಾರ್, ಮಾರ್ಕಾಲು ಮಾಧು, ಮಹೇಶ್ ಇದ್ದರು.