- ಪ್ಯಾರಾ ಮೆಡಿಕಲ್ ಡಿಪ್ಲೊಮಾ ಇನ್ ಆಪ್ತಾಲ್ಮಿಕ್ ಟೆಕ್ನಾಲಜಿ
- ವಿದ್ಯಾ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ
ಮಳವಳ್ಳಿ: ಪ್ಯಾರಾ ಮೆಡಿಕಲ್ ಡಿಪ್ಲೊಮಾ ಇನ್ ಆಪ್ತಾಲ್ಮಿಕ್ ಟೆಕ್ನಾಲಜಿ ವ್ಯಾಸಂಗ ಮಾಡಿರುವ ಅಭ್ಯರ್ಥಿಗಳಿಗೆ ಪಟ್ಟಣದ ವಿದ್ಯಾ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಫೆ.28ರಂದು ಬೆಂಗಳೂರಿನ ಖಾಸಗಿ ಕಂಪನಿಯಿಂದ ಕ್ಯಾಂಪಸ್ ಸಂದರ್ಶನ ಆಯೋಜಿಸಲಾಗಿದೆ.
ಕಂಪನಿಯ ಮೇಲಧಿಕಾರಿಗಳು ಅಂದು ಬೆಳಗ್ಗೆ 11 ರಿಂದ 3 ಗಂಟೆವರೆಗೆ ನೇರ ನೇಮಕಾತಿಗೆ ಸಂದರ್ಶನ ನಡೆಸಲಿದ್ದಾರೆ. ಆಸಕ್ತ ಅಭ್ಯರ್ಥಿಗಳು ಹೆಸರು ಮತ್ತು ಇ-ಮೇಲ್ ಐಡಿ ಕಳುಹಿಸಿ ನೋಂದಣಿ ಮಾಡಿಕೊಂಡು ಸಂದರ್ಶನಕ್ಕೆ ಹಾಜರಾಗಬಹುದು ಎಂದು ಕಾಲೇಜು ಪ್ರಾಂಶುಪಾಲ ಚಂದ್ರಮೋಹನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.