ಪಾಂಡವಪುರ ತಾಲೂಕಿನ ಚಾಗಶೆಟ್ಟಹಳ್ಳಿ ಗ್ರಾಮದಲ್ಲಿ ಎಸ್‌ಟಿಜಿ ಪ್ರಥಮ ದರ್ಜೆ ಕಾಲೇಜಿನ ಎನ್‌ಎಸ್‌ಎಸ್ ಘಟಕದ ವತಿಯಿಂದ ನಡೆದ ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭದಲ್ಲಿ ಎಸ್‌ಟಿಜಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಸಿ.ಎಸ್.ಪುಟ್ಟರಾಜು ಮಾತನಾಡಿದರು. ಶ್ರೀ ಶಿವಬಸವ ಸ್ವಾಮೀಜಿ, ರಾಜೇಶ್ ಗುರೂಜಿ ಇದ್ದರು.
ಪಾಂಡವಪುರ: ಮನುಷ್ಯನ ಬದುಕು ಕ್ಷಣಿಕ. ದೊಡ್ಡ ಸಾಧನೆ ಮಾಡಿದವರೆಲ್ಲ ಕಣ್ಣ ಮುಂದೆಯೇ ಕಣ್ಮರೆಯಾಗುತ್ತಿರುವುದನ್ನು ನೋಡಿದರೆ ನೋವಾಗುತ್ತದೆ. ನಾವು ದ್ವೇಷ, ಅಸೂಯೆ, ಅಹಂಕಾರ ಬಿಟ್ಟು ಸಹಬಾಳ್ವೆಯಿಂದ ಬದುಕುವುದನ್ನು ಕಲಿಯಬೇಕು ಎಂದು ಎಸ್‌ಟಿಜಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರೂ ಆದ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿದರು.
ತಾಲೂಕಿನ ಚಾಗಶೆಟ್ಟಹಳ್ಳಿ ಗ್ರಾಮದಲ್ಲಿ ಎಸ್‌ಟಿಜಿ ಪ್ರಥಮ ದರ್ಜೆ ಕಾಲೇಜಿನ ಎನ್‌ಎಸ್‌ಎಸ್ ಘಟಕದ ವತಿಯಿಂದ ನಡೆದ ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಗ್ರಾಮೀಣ ಪ್ರದೇಶದ ಜನರ ಬದುಕು ಸುಂದರವಾಗಿದೆ. ಕಷ್ಟ-ಸುಖ, ನೋವು-ನಲಿವು ಎಲ್ಲವನ್ನು ಒಳಗೊಂಡಿರುವ ನಮ್ಮ ಹಳ್ಳಿಗಳ ಸುಧಾರಣೆಗೆ ಪ್ರತಿಯೊಬ್ಬರು ಮುಂದಾಗಬೇಕಿದೆ. ಎನ್‌ಎಸ್‌ಎಸ್ ಶಿಬಿರಗಳ ಮೂಲಕ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದ ಜನರ ಬದುಕನ್ನು ಅರ್ಥಮಾಡಿಕೊಳ್ಳಬೇಕು. ಜನರಿಗೆ ಸ್ವಚ್ಛತೆ, ಆರೋಗ್ಯದ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.
ಚಾಗಶೆಟ್ಟಹಳ್ಳಿ ಗ್ರಾಮದ ಜನರು ಎನ್‌ಎಸ್‌ಎಸ್ ವಿದ್ಯಾರ್ಥಿಗಳನ್ನು ಏಳು ದಿನಗಳ ಕಾಲ ತಮ್ಮ ಮಕ್ಕಳಂತೆ ನೋಡಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಹಳ್ಳಿಗಳಲ್ಲಿ ಶಿಬಿರ ಆಯೋಜನೆ ಮಾಡಿ ಶಿಬಿರಗಳ ಮೂಲಕ ಜನರಿಗೆ ಶೈಕ್ಷಣಿಕ, ಆರ್ಥಿಕ, ಆರೋಗ್ಯ, ಕೃಷಿ ಸೇರಿದಂತೆ ಇನ್ನಿತರೆ ವಿಷಯಗಳ ಕುರಿತು ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ಬೇಬಿ ಬೆಟ್ಟದ ಶ್ರೀ ರಾಮಯೋಗೇಶ್ವರ ಮಠದ ಪೀಠಾಧ್ಯಕ್ಷ ಶ್ರೀ ಶಿವಬಸವ ಸ್ವಾಮೀಜಿ, ವಿಜಯಕಾಳಿ ಮಠದ ರಾಜೇಶ್ ಗುರೂಜಿ, ಎಸ್‌ಟಿಜಿ ಶಿಕ್ಷಣ ಸಂಸ್ಥೆಯ ಸಿಇಒ ಸಿ.ಪಿ.ಶಿವರಾಜು, ಪ್ರಾಂಶುಪಾಲ ಡಾ.ನಿಶಾಂತ್ ಎ.ನಾಯ್ಡು, ಮಂಡ್ಯ ವಿವಿ ಎನ್‌ಎಸ್‌ಎಸ್ ಯೋಜನಾಧಿಕಾರಿ ಡಾ.ಪ್ರಮೀಳಾ, ಸಬ್ ಇನ್‌ಸ್ಪೆಕ್ಟರ್ ಉಮೇಶ್, ಗ್ರಾಪಂ ಅಧ್ಯಕ್ಷೆ ಆಶಾರಾಣಿ, ಉಪಾಧ್ಯಕ್ಷೆ ಮಹದೇವಮ್ಮ, ಜೆಡಿಎಸ್ ಅಧ್ಯಕ್ಷ ಎಸ್.ಎ.ಮಲ್ಲೇಶ್, ಕಂದಾಯ ನಿರೀಕ್ಷ ಟಿ.ಪಿ.ರೇವಣ್ಣ, ಮಾಣಿಕ್ಯನಹಳ್ಳಿ ಅಶೋಕ್, ಚಲುವರಾಜು, ಗ್ರಾಪಂ ಸದಸ್ಯ ಕಾಂತರಾಜು, ಎಸ್.ಆನಂದ್, ಶಿವಕುಮಾರ್, ಶಿಂಡಬೋಗನಹಳ್ಳಿ ನಾಗಣ್ಣ, ಗ್ರಾಮಸ್ಥರಾದ ನಂಜಪ್ಪ, ಕೃಪ, ಬಸಪ್ಪ, ಸೋಮಣ್ಣ, ಮಹೇಶ, ಶಂಕರಣ್ಣ, ನಾಗೇಂದ್ರ, ಮನು, ಎನ್‌ಎಸ್‌ಎಸ್ ಶಿಬಿರಾಧಿಕಾರಿ ಕುಮಾರ್ ಬಿ.ಎಸ್, ಸಹ ಶಿಬಿರಾಧಿಕಾರಿ ವಿ.ಶ್ರೀಧರ, ರಘುನಂದನ್, ಪೂಜಾ, ಓಂಕಾರ್, ನಿರಂಜನ್, ರಂಜಿತ್, ಸುರಭಿ ಇದ್ದರು.