- ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನಡೆದ ಪ್ರಬಂಧ ಸ್ಪರ್ಧೆ
- ವಿದ್ಯಾರ್ಥಿನಿ ಎಸ್.ಸಿಂಚನಾ ಪ್ರಥಮ ಸ್ಥಾನ
- ಗ್ರಾಮೀಣ ಐಟಿ ರಸಪ್ರಶ್ನೆ ಕಾರ್ಯಕ್ರಮ
ಮದ್ದೂರು : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಅ.10 ರಂದು ಏರ್ಪಡಿಸಿದ್ದ ಇಂದಿರಾ ಪ್ರಿಯದರ್ಶಿನಿ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಶಿವಪುರದ ಪೂರ್ಣ ಪ್ರಜ್ಞ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಎಸ್.ಸಿಂಚನಾ ಪ್ರಥಮ ಸ್ಥಾನಗಳಿಸಿದ್ದಾಳೆ.
ಅ.24 ಮದ್ದೂರು ನಗರಸಭೆ ವತಿಯಿಂದ 50ನೇ ವರ್ಷದ ಸುವರ್ಣ ಮಹೋತ್ಸವದ ಅಂಗವಾಗಿ ಏರ್ಪಡಿಸಿದ್ದ ಪರಿಸರ ಮಾಲಿನ್ಯ ಕುರಿತ ಪ್ರಬಂಧ ಸ್ಪರ್ಧೆಯಲ್ಲಿ 7ನೇ ತರಗತಿ ವಿದ್ಯಾರ್ಥಿನಿ ಎಸ್.ಸಿಂಚನಾ (ಪ್ರ), 10 ನೇ ತರಗತಿಯ ಎಸ್.ಪಿ.ಚಂದನಾ (ದ್ವಿ)ಸ್ಥಾನ ಪಡೆದಿದ್ದಾರೆ.
ಅ.30 ರಂದು ಕರ್ನಾಟಕದ ನಾವಿನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ, ಮಾಹಿತಿ ತಂತ್ರಜ್ಞಾನ, ವಿಜ್ಞಾನ, ತಂತ್ರಜ್ಞಾನ ಇಲಾಖೆ, ಬೆಂಗಳೂರು ಹಾಗೂ ಜಿಲ್ಲಾ ಆಡಳಿತ ಮತ್ತು ಜಿಲ್ಲಾ ಪಂಚಾಯತ್ ಮಂಡ್ಯ ಜಿಲ್ಲೆ ಮಂಡ್ಯ, ಶಾಲಾ ಶಿಕ್ಷಣ ಇಲಾಖೆ, ಮಂಡ್ಯ ಜಿಲ್ಲೆ ವತಿಯಿಂದ ಏರ್ಪಡಿಸಿದ್ದ ಗ್ರಾಮೀಣ ಐಟಿ ರಸಪ್ರಶ್ನೆ ಕಾರ್ಯಕ್ರಮದಲ್ಲಿ 10ನೇ ತರಗತಿಯಲ್ಲಿ ವಿದ್ಯಾರ್ಥಿನಿಗಳಾದ ವಿ.ಪ್ರೀತಮ್, ಎಸ್.ಆರ್.ಭುವನಗೌಡ ವಿಭಾಗದ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅ.30 ರಂದು ತಾಲೂಕು ಮಟ್ಟದಲ್ಲಿ ನಡೆದ ಯುವ ಸಂಸತ್ ಸ್ಪರ್ಧೆಯಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಟಿ.ನೂತನಾ. 9ನೇ ತರಗತಿ ವಿದ್ಯಾರ್ಥಿನಿ ಎಸ್.ಪಿ.ಚಂದನಾ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅ.29 ರಂದು ಜಿಲ್ಲಾ ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ ವತಿಯಿಂದ ಮಂಡ್ಯದಲ್ಲಿ ನಡೆದ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ 100 ಮೀಟರ್ ಓಟದಲ್ಲಿ ಎಸ್.ಹರ್ಷ(ಪ್ರ), ಗುಂಡು ಎಸೆತ ವಿ.ಪ್ರೀತಮ್ (ದ್ವಿ) ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಾಲೆಗೆ ಕೀರ್ತಿ ತಂದ ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷೆ ಪಿ.ಕಸ್ತೂರಿ, ಕಾರ್ಯದರ್ಶಿ ಎಚ್.ಆರ್.ಅನಂತೇಗೌಡ ಅಭಿನಂದಿಸಿದ್ದಾರೆ.