ಮಳವಳ್ಳಿಯ ಅಂಬೇಡ್ಕರ್ ಭವನದಲ್ಲಿ ತಾಲೂಕು ಆಡಳಿತದ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಉದ್ಘಾಟಿಸಿದರು. ತಹಸೀಲ್ದಾರ್ ಲೋಕೇಶ್, ಇಒ ಶ್ರೀನಿವಾಸ್, ಬಿಇಒ ಉಮಾ, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಸಂತೋಷ್ ಇದ್ದರು. 
ಮಂಡ್ಯ

ಮಳವಳ್ಳಿ ವಿವಿಧೆಡೆ ಸಂವಿಧಾನ ಸಮರ್ಪಣಾ ದಿನಾಚರಣೆ

ಮಳವಳ್ಳಿ: ಪಟ್ಟಣ ಸೇರಿದಂತೆ ತಾಲೂಕಿನೆಲ್ಲೆಡೆ ಬುಧವಾರ 79ನೇ ಸಂವಿಧಾನ ಸಮರ್ಪಣಾ ದಿನಾಚರಣೆ ಕಾರ್ಯಕ್ರಮಗಳು ನಡೆದವು.
ತಾಲೂಕು ಆಡಳಿತದ ವತಿಯಿಂದ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ಸಮರ್ಪಣಾ ದಿನ ಕಾರ್ಯಕ್ರಮವನ್ನು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಉದ್ಘಾಟಿಸಿ ಮಾತನಾಡಿ, ದೇಶದಲ್ಲಿ ಕಾನೂನು ಆಡಳಿತ ಸುಸೂತ್ರವಾಗಿ ನಡೆದುಕೊಂಡು ಹೋಗುತ್ತಿರುವುದಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ವಿದ್ವತ್, ಚಿಂತನೆ ಹಾಗೂ ದೂರದೃಷ್ಟಿ ಯೊಂದಿಗೆ ರಚಿತವಾದ ವಿಶ್ವಶ್ರೇಷ್ಠ ಸಂವಿಧಾನ ಕಾರಣವಾಗಿದೆ. ಹಾಗಾಗಿ, ಅಂಬೇಡ್ಕರ್ ಸದಾ ಸ್ಮರಣೀಯರಾಗಿದ್ದಾರೆ ಎಂದರು.
ತಹಸೀಲ್ದಾರ್ ಡಾ.ಲೋಕೇಶ್, ತಾಪಂ ಇಒ ಶ್ರೀನಿವಾಸ್, ಸಮಾಜ ಕಲ್ಯಾಣಾಧಿಕಾರಿ ಸಂತೋಷ್, ಬಿಇಒ ಉಮಾ ಸೇರಿದಂತೆ ಇತರ ಮುಖಂಡರಿದ್ದರು.
ಕಸಾಪ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮಳವಳ್ಳಿ, ದಲಿತ ಸಾಹಿತ್ಯ ಪರಿಷತ್ ಮಳವಳ್ಳಿ ಸಹಯೋಗದಲ್ಲಿ ತಾಲೂಕು ಕನ್ನಡ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಸಂವಿಧಾನ ಪೀಠಿಕೆಯನ್ನು ಬೋಧಿಸಲಾಯಿತು. ಕಸಾಪ ಅಧ್ಯಕ್ಷ ಚೇತನ್‌ಕುಮಾರ್, ದಲಿತ ಸಾಹಿತ್ಯ ಪರಿಷತ್ ಅಧ್ಯಕ್ಷ ಚುಂಚಣ್ಣ, ಓಂಪ್ರಕಾಶ್, ಶಿವಣ್ಣ, ಸಿದ್ದರಾಜು, ಹನುಮಂತಪ್ಪ, ಸುರೇಶ್, ಜಯರಾಜು, ನಾಗಯ್ಯ ಇತರರಿದ್ದರು.
ನ್ಯಾಯಾಲಯ ಆವರಣ: ಮಳವಳ್ಳಿ ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯದ ಆವರಣದಲ್ಲಿ ವಕೀಲರ ಸಂಘದ ವತಿಯಿಂದ ಆಯೋಜಿಸಿದ್ದ ಸಂವಿಧಾನ ದಿನ ಕಾರ್ಯಕ್ರಮದಲ್ಲಿ ನ್ಯಾಯಾಧೀಶರು, ವಕೀಲರು ಹಾಗೂ ನ್ಯಾಯಾಲಯದ ಸಿಬ್ಬಂದಿ ಪಾಲ್ಗೊಂಡು ಸಂವಿಧಾನ ಶಿಲ್ಪಿ ಡಾ.ಬಿ ಅರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ನ್ಯಾಯಾಧೀಶರಾದ ಎಂ.ಮಹೇಂದ್ರ, ನಾಜಿಯಾ ಕೌಸರ್, ಎಚ್.ಎಸ್.ಕಾವ್ಯಶ್ರೀ, ಅಪರ ಸರ್ಕಾರಿ ವಕೀಲ ಶ್ರೀಕಂಠಸ್ವಾಮಿ, ವಕೀಲರ ಸಂಘದ ಅಧ್ಯಕ್ಷ ಡಿ.ಎಂ.ಸುಂದರ್ ಸೇರಿದಂತೆ ಇತರರು ಇದ್ದರು.
ತಾಲೂಕಿನ ದೊಡ್ಡಬೂಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಗ್ರಾಮದ ಬಡಾವಣೆಗಳಲ್ಲಿ ಜಾಗೃತಿ ಜಾಥಾ ನಡೆಸುವ ಮೂಲಕ ಸಂವಿಧಾನ ದಿನವನ್ನು ವಿಶೇಷವಾಗಿ ಆಚರಿಸಿದರು. ಮುಖ್ಯಶಿಕ್ಷಕ ನಾಗೇಂದ್ರಮೂರ್ತಿ, ಎಸ್‌ಡಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ, ಸದಸ್ಯರಾದ ನಿಂಗರಾಜು, ವೆಂಕಟೇಶ, ನಾಗರಾಜಸ್ವಾಮಿ, ಮಹೇಶ್, ಸಹ ಶಿಕ್ಷಕರಾದ ಅಣ್ಣಯ್ಯ, ಮಮತಾ, ಜಯಮ್ಮ, ಸುನಂದಾ, ಗುಂಡಪ್ಪ, ಮನುಜ ಇದ್ದರು.