ಮದ್ದೂರು ನಗರದ ಶ್ರೀ ನರಸಿಂಹ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಅಹಿಂದ ಸಂರಕ್ಷಣಾ ವೇದಿಕೆಯ ವತಿಯಿಂದ ಡಿ.ದೇವರಾಜು ಅರಸು ಪುಣ್ಯ ಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಎಲ್.ಸಂದೇಶ್, ಕೆ.ಟಿ.ಶಿವಕುಮಾರ್, ಪಿ.ಶಶಿಕುಮಾರ್, ದಾಕ್ಷಾಯಿಣಿ, ಚಿಕ್ಕಮ್ಮ, ರಾಚಯ್ಯ ಇದ್ದರು.
ಮದ್ದೂರು: ನಗರದ ಶ್ರೀ ನರಸಿಂಹ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಅಹಿಂದ ಸಂರಕ್ಷಣಾ ವೇದಿಕೆ ವತಿಯಿಂದ ಭಾನುವಾರ ಹಿಂದುಳಿದ ವರ್ಗಗಳ ನೇತಾರ ಡಿ.ದೇವರಾಜು ಅರಸು ಅವರ ಪುಣ್ಯ ಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ವೇದಿಕೆಯ ಜಿಲ್ಲಾಧ್ಯಕ್ಷ ಎಲ್.ಸಂದೇಶ್ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ಡಿ.ದೇವರಾಜು ಅರಸು ಮುಖ್ಯ ಮಂತ್ರಿಯಾಗಿದ್ದ ಸಂದರ್ಭದಲ್ಲಿ ಉಳುವವನೇ ಭೂಮಿ ಒಡೆಯ ಎಂಬ ಕಾನೂನನ್ನು ಜಾರಿಗೆ ತಂದ ಪರಿಣಾಮವೇ ಇವತ್ತು ಶೋಷಿತ ವರ್ಗಗಳು ಒಂದಷ್ಟು ಭೂಮಿ ಹೊಂದಲು ಸಾಧ್ಯವಾಯಿತು ಎಂದು ತಿಳಿಸಿದರು.
ಅಂಬೇಡ್ಕರ್ ಅವರ ಆಶಯದಂತೆ ನಾವೆಲ್ಲರೂ ಸಮಾನತೆ ಹೊಂದಬೇಕಾದರೆ ಸಾವಿರಾರು ಎಕರೆ ಭೂಮಿ ಹೊಂದಿರುವಂತಹವರು ಭೂಮಿ ಇಲ್ಲದವರಿಗೆ ಹಂಚಿಕೆ ಮಾಡಬೇಕು. ಆಗಷ್ಟೆ ನಮ್ಮ ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಅಹಿಂದ ಸಂರಕ್ಷಣಾ ವೇದಿಕೆಯ ದಾಕ್ಷಾಯಿಣಿ, ಚಿಕ್ಕಮ್ಮ ಮಾತನಾಡಿದರು. ವೇದಿಕೆಯ ಸಂಘಟನಾ ಕಾರ್ಯದರ್ಶಿ ಪಿ.ಶಶಿಕುಮಾರ್, ಸಂಚಾಲಕ ಆಶಿಷ್ ಪಾಷಾ, ದಲಿತ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಟಿ.ಶಿವಕುಮಾರ್, ಸಹಕಾರ್ಯದರ್ಶಿ ರಾಚಯ್ಯ, ಚಂದ್ರಶೇಖರ್, ಧನಂಜಯ, ಚಿಕ್ಕನಂಜಚಾರಿ, ಮೋಹನ್, ವೆಂಕಟೇಶ್, ಜೋಗಿ, ದೇವು, ಉಮೇಶ್ ಇದ್ದರು.