ಪಾಂಡವಪುರ ತಾಲೂಕಿನ ಕನಗನಮರಡಿ ಗ್ರಾಮದ ಬಳಿ ನಿರ್ಮಿಸಲಾಗುತ್ತಿರುವ ನೀರು ಶುದ್ಧೀಕರಣ ಘಟಕದ ಕಾಮಗಾರಿ ಪ್ರಗತಿಯನ್ನು ಜಿಲ್ಲಾಧಿಕಾರಿ ಡಾ.ಕುಮಾರ್ ಹಾಗೂ ಜಿಪಂ ಸಿಇಒ ನಂದಿನಿ ಪರಿಶೀಲಿಸಿದರು. 
ಮಂಡ್ಯ

ನೀರು ಶುದ್ಧೀಕರಣ ಘಟಕ ಪರಿಶೀಲಿಸಿದ ಡಿಸಿ

ನಾಗೇಶ ಎಸ್
ಪಾಂಡವಪುರ: ಮಂಡ್ಯ ಮತ್ತು ಮದ್ದೂರು ತಾಲೂಕಿನ ಜನವಸತಿ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವ ಉದ್ದೇಶದಿಂದ ಕೈಗೆತ್ತಿಕೊಳ್ಳಲಾಗಿರುವ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯಡಿ ಪಾಂಡವಪುರ ತಾಲೂಕಿನ ಕನಗನಮರಡಿ ಗ್ರಾಮದ ಬಳಿ ನಿರ್ಮಿಸಲಾಗುತ್ತಿರುವ ನೀರು ಶುದ್ಧೀಕರಣ ಘಟಕದ ಕಾಮಗಾರಿ ಪ್ರಗತಿಯನ್ನು ಜಿಲ್ಲಾಧಿಕಾರಿ ಡಾ.ಕುಮಾರ್ ಹಾಗೂ ಜಿಪಂ ಸಿಇಒ ಕೆ.ಆರ್.ನಂದಿನಿ ಪರಿಶೀಲಿಸಿದರು.
ಯೋಜನೆಯಡಿ ಕೈಗೆತ್ತಿಕೊಳ್ಳಲಾಗಿರುವ ನೀರು ಶುದ್ಧೀಕರಣ ಘಟಕ ಸೇರಿದಂತೆ ವಿವಿಧ ಘಟಕಗಳ ಪ್ರಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಕಾಮಗಾರಿಯ ಪ್ರಸ್ತುತ ಹಂತ, ಪೂರ್ಣಗೊಳ್ಳಬೇಕಿರುವ ಕಾಮಗಾರಿಗಳು ಹಾಗೂ ಎದುರಾಗಿರುವ ಸಮಸ್ಯೆಗಳ ಕುರಿತು ಮಾಹಿತಿ ಪಡೆದು, ಯಾವುದೇ ಕಾರಣಕ್ಕೂ ಕಾಮಗಾರಿ ವಿಳಂಬವಾಗದಂತೆ ಅಗತ್ಯ ಕ್ರಮವಹಿಸಿ, ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸೂಚಿಸಿದರು.
ಈ ವೇಳೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರ ಎನ್.ಜಿ.ಪ್ರಮೋದ್ ಕುಮಾರ್, ಸಹಾಯಕ ಅಭಿಯಂತರ ಶ್ರೀಧರ್, ಗುತ್ತಿಗೆ ಸಂಸ್ಥೆಯ ಸಿಬ್ಬಂದಿ ಇದ್ದರು.