ಪಾಂಡವಪುರ ಪಟ್ಟಣದ ತಾಲೂಕು ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಸಾರ್ವಜನಿಕರ ಅಹವಾಲು ಆಲಿಸಿದರು. 
ಮಂಡ್ಯ

ತಾಲೂಕು ಕಚೇರಿಗೆ ಡಿಸಿ ದಿಢೀರ್ ಭೇಟಿ: ಜನರ ಕೆಲಸ ವಿಳಂಭ ಮಾಡದಂತೆ ಸೂಚನೆ

ಪ್ರಮುಖ ಮುಖ್ಯಾಂಶಗಳು

  • ಸಾರ್ವಜನಿಕರ ಅಹವಾಲು ಸ್ವೀಕಾರ
  • ಶಿಷ್ಠಾಚಾರದಂತೆ ಕಟ್ಟುನಿಟ್ಟಾಗಿ ಕಾರ್ಯನಿರ್ವಹಿಸುವಂತೆ ಸೂಚನೆ
ಪಾಂಡವಪುರ: ಪಟ್ಟಣದಲ್ಲಿರುವ ತಾಲೂಕು ಕಚೇರಿಗೆ ಜಿಲ್ಲಾಧಿಕಾರಿ ಡಾ.ಕುಮಾರ ದಿಢೀರ್ ಭೇಟಿ ನೀಡಿದರು. ಅಂತೆಯೇ ವಿವಿಧ ಶಾಖೆಗಳ ಕಾರ್ಯನಿರ್ವಹಣೆ, ಕಡತ ವಿಲೇವಾರಿ, ಸಿಬ್ಬಂದಿ ಹಾಜರಾತಿ ಹಾಗೂ ಸಾರ್ವಜನಿಕ ಸೇವೆಗಳ ಅನುಷ್ಠಾನವನ್ನು ಪರಿಶೀಲಿಸಿದರು.
ಇ-ಆಫೀಸ್‌ನಲ್ಲಿನ ಬಾಕಿ ಕಡತಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡುವಂತೆ ಹಾಗೂ ಆದಾಯ, ಜಾತಿ, ನಿವಾಸ, ವಂಶವೃಕ್ಷ, ಭೂಹಿಡುವಳಿ ಪ್ರಮಾಣಪತ್ರ ಸೇರಿದಂತೆ ಎಲ್ಲಾ ಸೇವೆಗಳನ್ನು ಸಕಾಲ ಯೋಜನೆಯಡಿ ನಿಗದಿತ ಅವಧಿಯಲ್ಲಿಯೇ ಒದಗಿಸುವಂತೆ ಕಟ್ಟುನಿಟ್ಟಾಗಿ ಸೂಚಿಸಿದರು. ವಿಳಂಬವಾದಲ್ಲಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
ನಂತರ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಸಭೆ ಮಾಡಲಾಯಿತು. ಪ್ರಕರಣಗಳ ಸಮರ್ಪಕ ನಿರ್ವಹಣೆಗೆ ಸಂಬಂಧಿಸಿದ ಅಗತ್ಯ ಕ್ರಮಗಳ ಕುರಿತು ನಿರ್ದೇಶನ ನೀಡಿದರು. ಜತೆಗೆ ನ್ಯಾಯಾಲಯದ ಆದೇಶಗಳನ್ನು ಹೊರಡಿಸುವ ಸಂದರ್ಭದಲ್ಲಿ ಪ್ರಚಲಿತ ನಿಯಮಾವಳಿ, ನಿಗದಿತ ವಿಧಾನ ಹಾಗೂ ನ್ಯಾಯಾಲಯದ ಶಿಷ್ಠಾಚಾರದಂತೆ ಕಟ್ಟುನಿಟ್ಟಾಗಿ ಕಾರ್ಯನಿರ್ವಹಿಸುವಂತೆ ಸಭೆಯಲ್ಲಿ ಸ್ಪಷ್ಟವಾಗಿ ಸೂಚಿಸಲಾಯಿತು.
ಪಾಂಡವಪುರ ಎಸಿ ಶ್ರೀನಿವಾಸ್ ಇದ್ದರು.