ಮದ್ದೂರು ತಾಲೂಕಿನ ಕೊಪ್ಪ ಹೋಬಳಿಯ ಚಿಕ್ಕದೊಡ್ಡಿ ಗ್ರಾಮದ ಶ್ರೀರಾಮ ಮಂದಿರ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮ ಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯ ವತಿಯಿಂದ 2.50 ಲಕ್ಷ ರೂ.ಗಳ ಡಿಡಿ ಅನ್ನು ಜಿಲ್ಲಾ ನಿರ್ದೇಶಕಿ ಚೇತನ ಹಸ್ತಾಂತರಿಸಿದರು. ಸಿದ್ದಯ್ಯ, ಹಾಲಪ್ಪ, ದೇವಸ್ಥಾನ ಸಮಿತಿ ಸದಸ್ಯರು ಹಾಗೂ ಗ್ರಾಮಸ್ಥರು ಇದ್ದರು.
ಮದ್ದೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಹಲವು ಸಮಾಜ ಮುಖಿ ಕಾರ್ಯಕ್ರಮಗಳಿಂದ ಜನರಿಗೆ ಅನುಕೂಲವಾಗಿದೆ ಎಂದು ಸಂಸ್ಥೆಯ ಜಿಲ್ಲಾ ನಿರ್ದೇಶಕಿ ಚೇತನಾ ತಿಳಿಸಿದರು.
ತಾಲೂಕಿನ ಕೊಪ್ಪ ಹೋಬಳಿಯ ಚಿಕ್ಕದೊಡ್ಡಿ ಗ್ರಾಮದ ಶ್ರೀರಾಮ ಮಂದಿರ ಜೀರ್ಣೋದ್ಧಾರಕ್ಕೆ ಬುಧವಾರ ಸಂಸ್ಥೆಯಿಂದ 2.50 ಲಕ್ಷ ರೂ. ಡಿಡಿ ಹಸ್ತಾಂರಿಸಿ ಮಾತನಾಡಿದರು.
ಸಂಸ್ಥೆಯು ದೇಗುಲಗಳ ಜೀರ್ಣೋದ್ಧಾರ, ಸ್ವಚ್ಛತೆ, ಕೆರೆ-ಕಟ್ಟೆಗಳ ಅಭಿವೃದ್ಧಿ, ಮಧ್ಯವರ್ಜನ ಶಿಬಿರ ಸೇರಿದಂತೆ ಹಲವು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಮಾಜದ ಅಭ್ಯುದಯಕ್ಕೆ ನಿರಂತರವಾಗಿ ಶ್ರಮಿಸುತ್ತಿದೆ ಎಂದರು.
ದೇಗುಲಗಳು ಕೇವಲ ಪೂಜಾ ಸ್ಥಳಗಳಲ್ಲದೆ, ಭಾರತೀಯ ಸಂಸ್ಕೃತಿಯಲ್ಲಿ ಧಾರ್ಮಿಕ, ಅಧ್ಯಾತ್ಮಿಕ, ಸಾಮಾಜಿಕ ಮತ್ತು ಐತಿಹಾಸಿಕ ಕೇಂದ್ರಗಳಾಗಿವೆ. ಇವು ವ್ಯಕ್ತಿಯ ಮಾನಸಿಕ ಶಾಂತಿ ಮತ್ತು ಸಮಾಜದ ಒಳಿತಿನಲ್ಲಿ ಅತ್ಯಂತ ಪ್ರಮುಖ ಪಾತ್ರವನ್ನು ವಹಿಸುತ್ತವೆ ಎಂದರು.
ಶ್ರೀ ರಾಮ ಮಂದಿರ ಜೀರ್ಣೋದ್ಧಾರ ಸೇವಾ ಸಮಿತಿ ಅಧ್ಯಕ್ಷ ಸಿದ್ದಯ್ಯ, ತಾಲೂಕು ಯೋಜನಾಧಿಕಾರಿಗಳಾದ ಹಾಲಪ್ಪ ಹಾಗೂ ದೇವಸ್ಥಾನ ಸಮಿತಿಯವರು, ಗ್ರಾಮಸ್ಥರು ಇದ್ದರು.