ಗಂಜಾಂನ ರಿವರ್‌ವ್ಯಾಲಿ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಕ್ಕಳು ಅಧಿಕಾರ ಸ್ವೀಕರಿಸಿದರು. ಆರ್.ಆದರ್ಶ, ಭಾನುಪ್ರಿಯಾ, ಸಿದ್ಲಿಂಗು, ಸ್ಪಂದನಾ ಇದ್ದರು. 
ಮಂಡ್ಯ

ಶಾಲಾ ಹಂತದಲ್ಲೇ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸಿ

ಪ್ರಮುಖ ಮುಖ್ಯಾಂಶಗಳು

  • ರಿವರ್‌ವ್ಯಾಲಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಆರ್.ಆದರ್ಶ ಹೇಳಿಕೆ
ಶ್ರೀರಂಗಪಟ್ಟಣ: ರಿವರ್‌ವ್ಯಾಲಿ ಶಿಕ್ಷಣ ಸಂಸ್ಥೆ ಆವರಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ 9ನೇ ತರಗತಿ ವಿದ್ಯಾರ್ಥಿ ಜಿ.ಕೆ.ಲಿಖಿತ್ ವಿದ್ಯಾರ್ಥಿ ಸಂಘದ ಅಧ್ಯಕ್ಷ(ಪ್ರೆಸಿಡೆಂಟ್)ರಾಗಿ ಅಧಿಕಾರ ಸ್ವೀಕರಿಸಿದರು.
ಪಟ್ಟಣ ಸಮೀಪದ ಗಂಜಾಂನ ಚಂದಗಾಲು ರಸ್ತೆಯಲ್ಲಿರುವ ಶಿಕ್ಷಣ ಸಂಸ್ಥೆಯಲ್ಲಿ ಇತ್ತೀಚೆಗೆ ಸಂಸತ್ ಚುನಾವಣೆ ನಡೆದಿದ್ದು, ಸಾರ್ವತ್ರಿಕ ಚುನಾವಣೆ ಮಾದರಿಯಲ್ಲಿ ಮತದಾನ ಪ್ರಕ್ರಿಯೆ ನಡೆಯಿತು. ಈ ವೇಳೆ ಶಾಲಾ-ಕಾಲೇಜು ವಿದ್ಯಾರ್ಥಿಗಳು ತಮ್ಮ ನೆಚ್ಚಿನ ಪ್ರತಿನಿಧಿಗಳನ್ನು ಆಯ್ಕೆ ಮಾಡಿದರು.
ಸಂಸ್ಥೆ ಆವರಣದಲ್ಲಿ ಶುಕ್ರವಾರ ಆಡಳಿತ ಮಂಡಳಿಯಿಂದ ಆಯೋಜಿಸಿದ್ದ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷರಾಗಿ 10ನೇ ತರಗತಿ ಸಿ.ಮಾದೇಶ್, ಪ್ರಧಾನ ಮಂತ್ರಿಯಾಗಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ರುಬಿ ಪ್ರಿಯಾ, ಗೃಹಮಂತ್ರಿಯಾಗಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ತೇಜಸ್ವಿನಿ, ಆರೋಗ್ಯ ಮಂತ್ರಿಯಾಗಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಭುವನಾ, ಶಿಸ್ತು ಮತ್ತು ಶಿಕ್ಷಣ ಮಂತ್ರಿಯಾಗಿ 10ನೇ ತರಗತಿ ವಿದ್ಯಾರ್ಥಿನಿ ಸುಲ್ತಾನಿ, ಕ್ರೀಡಾ ಮಂತ್ರಿಯಾಗಿ 10ನೇ ತರಗತಿಯ ಮಾದೇಶ, ಸಾಂಸ್ಕೃತಿಕ ಮಂತ್ರಿಯಾಗಿ 9ನೇ ತರಗತಿಯ ಪಿ.ಸಿ.ಹಿತೈಷಿಣಿ ಹಾಗೂ ಉದ್ಯಾನ ಮಂತ್ರಿಯಾಗಿ 8ನೇ ತರಗತಿಯ ಆದಿತ್ಯಾ ಅಧಿಕಾರ ಸ್ವೀಕರಿಸಿದರು.
ಸಂಸ್ಥೆ ಅಧ್ಯಕ್ಷ ಆರ್.ಆದರ್ಶ ಮಾತನಾಡಿ, ಶಾಲಾ-ಕಾಲೇಜು ದಿನಗಳಲ್ಲೇ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು. ಮಕ್ಕಳು ವಹಿಸಿಕೊಂಡ ಜವಾಬ್ದಾರಿಯನ್ನು ಶಿಸ್ತು, ಬದ್ಧತೆ, ಸಮಯ ಮತ್ತು ಕರ್ತವ್ಯ ಪ್ರಜ್ಞೆಯಿಂದ ಪಾಲಿಸುವಂತಾಗಬೇಕು. ವಿದ್ಯಾರ್ಥಿಗಳೂ ಸಹ ತಮ್ಮಿಷ್ಟ ನಾಯಕರನ್ನು ತಾವೇ ಆಯ್ಕೆಗೊಳಿಸಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಭಾನುಪ್ರಿಯಾ, ಪ್ರಾಂಶುಪಾಲ ರಾಘವೇಂದ್ರ, ಕೋ ಆರ್ಡಿನೇಟರ್ ಸಿದ್ಲಿಂಗು, ಮುಖ್ಯಶಿಕ್ಷಕಿ ಸ್ಪಂದನಾ ಇತರರು ಉಪಸ್ಥಿತರಿದ್ದರು. ವಿದ್ಯಾರ್ಥಿ ಸಂಘಕ್ಕೆ ಆಯ್ಕೆಯಾದ ಪ್ರತಿನಿಧಿಗಳು ಶಿಸ್ತಿನ ಪಥಸಂಚಲನ ನಡೆಸಿದರು.