ಕಾಲುಜಾರಿ ಬಿದ್ದು ವ್ಯಕ್ತಿಯೊಬ್ಬರು ಮೃತ 
ಮಂಡ್ಯ

ದೊಡ್ಡಕೆರೆಯಲ್ಲಿ ಕಾಲುಜಾರಿ ಬಿದ್ದು ಮೃತ

ಅಭಿನಯ್ ಎಚ್.ಎಂ

ಪ್ರಮುಖ ಮುಖ್ಯಾಂಶಗಳು

  • ಮದ್ದೂರು -ಮಳವಳ್ಳಿ ಮುಖ್ಯರಸ್ತೆ ಬದಿಯಲ್ಲಿರುವ ದೊಡ್ಡಕೆರೆ
  • ದಾಸಪ್ರಕಾಶ್(66) ಮೃತ
ಮಳವಳ್ಳಿ: ಪಟ್ಟಣದ ಮದ್ದೂರು -ಮಳವಳ್ಳಿ ಮುಖ್ಯರಸ್ತೆ ಬದಿಯಲ್ಲಿರುವ ದೊಡ್ಡಕೆರೆಯಲ್ಲಿ ಬುಧವಾರ ಕಾಲುಜಾರಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಪಟ್ಟಣದ ಗಂಗಾಮತ ಬಡಾವಣೆ ನಿವಾಸಿ ದಾಸಪ್ರಕಾಶ್(66) ಮೃತರು. ಬಹಿರ್ದೆಸೆ ಮುಗಿಸಿ ನೀರು ತೆಗೆದುಕೊಳ್ಳಲೆಂದು ಕೆರೆಗೆ ಇಳಿದಿದ್ದು, ಈ ವೇಳೆ ಕಾಲುಜಾರಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕಾಗಮಿಸಿದ ಪೊಲೀಸರು, ನೀರಿನಲ್ಲಿ ತೇಲುತ್ತಿದ್ದ ಶವವನ್ನು ಮೇಲೆತ್ತಿ ಮಂಡ್ಯ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದರು. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.