ಮದ್ದೂರು ತಾಲೂಕಿನ ಕುರುಬರದೊಡ್ಡಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ.ಎಂ.ಉದಯ್ ಭೂಮಿಪೂಜೆ ನೆರವೇರಿಸಿದರು. ಮಹೇಶ್, ರಾಜಣ್ಣ, ನಾಗರಾಜು, ಶಂಕರಲಿಂಗಯ್ಯ ಇದ್ದರು. 
ಮಂಡ್ಯ

ಬೇಸಿಗೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಿರಲಿ

ಅಭಿನಯ್ ಎಚ್.ಎಂ

ಪ್ರಮುಖ ಮುಖ್ಯಾಂಶಗಳು

  • ಶಾಸಕ ಕೆ.ಎಂ.ಉದಯ್
  • ಕೆರೆ ಕಟ್ಟೆಗಳನ್ನು ತುಂಬಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ
ಮದ್ದೂರು: ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆ ಮತ್ತು ರೈತರ ಬೇಸಾಯಕ್ಕೆ ತೊಡಕುಂಟಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸುವುದರ ಜತೆಗೆ ಕೆರೆ ಕಟ್ಟೆಗಳನ್ನು ತುಂಬಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.
ತಾಲೂಕಿನ ಆತಗೂರು ಹೋಬಳಿ ವ್ಯಾಪ್ತಿಯ ಅವಸರದಹಳ್ಳಿ, ನವಿಲೆ, ಹರಕನಹಳ್ಳಿ, ಕುರುಬರ ದೊಡ್ಡಿ, ಹೆಬ್ಬೆರಳು ಹಾಗೂ ಅಂಕನಾಥಪುರ ಗ್ರಾಮ ವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿ ಹಾಗೂ ನೂತನ ಬಸ್ ತಂಗುದಾಣಕ್ಕೆ ಬುಧವಾರ ಭುಮಿಪೂಜೆ ನೆರವೇರಿಸಿ ಮಾತನಾಡಿದರು. ಕೆರೆ ಕಟ್ಟೆಗಳಿಗೆ ನೀರು ತುಂಬಿಸಿ ರೈತರಿಗೆ ಬೇಸಾಯಕ್ಕೆ ಅನುಕೂಲವಾಗಲೆಂಬ ಉದ್ದೇಶದಿಂದ 120 ಕೋಟಿ ರೂ. ವೆಚ್ಚದಲ್ಲಿ ಡಿ.ಪಿ.ಆರ್ ಸಿದ್ಧಪಡಿಸಿ ಸರ್ಕಾರದ ಅನುಮೋದನೆಗೆ ಕಳುಹಿಸಲಾಗಿದೆ. ಮುಂದಿನ ಸಚಿವ ಸಂಪುಟದಲ್ಲಿ ಇದಕ್ಕೆ ಅನುಮೋದನೆ ದೊರೆಯಲಿದೆ ಎಂದು ಹೇಳಿದರು.
ಕೆರೆ ಕಟ್ಟೆಗಳು ಭರ್ತಿಯಾಗುವುದರಿಂದ ಅಂತರ್ಜಲ ವೃದ್ಧಿಯಾಗಿ ಕೊಳವೆ ಬಾವಿಗಳಲ್ಲಿ ಸಮರ್ಪಕವಾಗಿ ನೀರು ಹರಿಯುವ ಜತೆಗೆ ಬೇಸಿಗೆಯಲ್ಲಿ ನೀರಿನ ಅಭಾವ ಎದುರಾಗುವುದುದಿಲ್ಲ ಎಂದರು.
ಆತಗೂರು ಹೋಬಳಿ ವ್ಯಾಪ್ತಿಯ ಪ್ರತಿ ಗ್ರಾಮದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ರೈತರ ಬಹುದಿನದ ಬೇಡಿಕೆಯಾದ ಏತ ನೀರಾವರಿ ಪುನಶ್ವೇತನ ಮತ್ತು 24/7 ಕುಡಿಯುವ ನೀರು ಪೂರೈಕೆಗೂ ಪೈಪ್ ಲೈನ್ ಅಳವಡಿಸಿ ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲಾಗುವುದು ಎಂದು ಹೇಳಿದರು.
ಮುಖಂಡರಾದ ಮಹೇಶ್, ರಾಜಣ್ಣ, ನಾಗರಾಜು, ಶಂಕರಲಿಂಗಯ್ಯ, ಪುಟ್ಟರಾಜು, ಬೋರೇಗೌಡ ಇತರರಿದ್ದರು.