ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಕೆಜಿಎಂಒಎ ರಾಜ್ಯ ಮಟ್ಟದ ವಾರ್ಷಿಕ ಸಮ್ಮೇಳನದಲ್ಲಿ ಡಾ.ಜಯಪ್ರಕಾಶ್ ಅವರಿಗೆ ಉತ್ತಮ ವೈದ್ಯ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಕೆ.ಆರ್.ಪೇಟೆ: ಕೆ.ಆರ್.ಪೇಟೆ ಸರ್ಕಾರಿ ತಾಲೂಕು ಆಸ್ಪತ್ರೆಯ ಸರ್ಜನ್ ಡಾ.ಜಯಪ್ರಕಾಶ್ ಅವರಿಗೆ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ(ಕೆಜಿಎಂಒಎ)ದ ವತಿಯಿಂದ 2026ನೇ ಸಾಲಿನ ’ಉತ್ತಮ ವೈದ್ಯ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಕೆಜಿಎಂಒಎ ರಾಜ್ಯ ಮಟ್ಟದ ವಾರ್ಷಿಕ ಸಮ್ಮೇಳನದಲ್ಲಿ ಡಾ.ಜಯಪ್ರಕಾಶ್ ಅವರಿಗೆ ಪ್ರಶಸ್ತಿ ಪತ್ರ, ಸ್ಮರಣಿಕೆ ನಗದು ನೀಡಿ ಸನ್ಮಾನಿಸಲಾಯಿತು. ಕಳೆದ ಹಲವು ವರ್ಷಗಳಿಂದ ಕೆ.ಆರ್.ಪೇಟೆ ತಾಲೂಕು ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ಡಾ.ಜಯಪ್ರಕಾಶ್, ದಿನಕ್ಕೆ ಸರಾಸರಿ 15 ರಿಂದ 20 ಶಸ್ತ್ರ ಚಿಕಿತ್ಸೆಗಳನ್ನು ನಡೆಸುತ್ತಿದ್ದಾರೆ.
ರೋಗಿಗಳಿಗೆ ಚಿಕಿತ್ಸೆ ನೀಡಿ, ಸರ್ಕಾರಿ ಆಸ್ಪತ್ರೆಯ ಮೇಲಿನ ಜನರ ನಂಬಿಕೆ ಹೆಚ್ಚಿಸಿರುವುದನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಕೆಜಿಎಂಒಎ ಅಧ್ಯಕ್ಷ ಡಾ.ರುದ್ರೇಶ್ ತಿಳಿಸಿದರು. ಪ್ರಶಸ್ತಿ ಸ್ವೀಕರಿಸಿದ ಡಾ.ಜಯಪ್ರಕಾಶ್, ಇದು ನನ್ನೊಬ್ಬನ ಸಾಧನೆಯಲ್ಲ. ಆಸ್ಪತ್ರೆಯ ಸಿಬ್ಬಂದಿ, ನರ್ಸ್‌ಗಳು ಹಾಗೂ ರೋಗಿಗಳ ಸಹಕಾರದಿಂದ ಸಿಕ್ಕ ಗೌರವ ಎಂದರು. ತಾಲೂಕಿನ ವಿವಿಧ ಸಂಘ-ಸಂಸ್ಥೆಗಳು, ರೋಗಿಗಳು ಹಾಗೂ ಸಾರ್ವಜನಿಕರು ಅಭಿನಂದನೆ ಸಲ್ಲಿಸಿದ್ದಾರೆ.