ಮಂಡ್ಯ ನಗರದ ಕೆಎಸ್‌ಆರ್‌ಟಿಸಿ ನಿಲ್ದಾಣದ ಆವರಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ್ಕೆ ಶಾಸಕ ಪಿ.ರವಿಕುಮಾರ್ ಗಣಿಗ ಚಾಲನೆ ನೀಡಿದರು. 
ಮಂಡ್ಯ

ಕುಡಿಯುವ ನೀರಿನ ಘಟಕಕ್ಕೆ ಚಾಲನೆ: ಕೆಎಸ್‌ಆರ್‌ಟಿಸಿ ನಿಲ್ದಾಣದ ಆವರಣದಲ್ಲಿ ಪ್ರಾರಂಭ

ಕೆ.ಎನ್.ರಾಘವೇಂದ್ರ

ಪ್ರಮುಖ ಮುಖ್ಯಾಂಶಗಳು

  • ಶಾಸಕ ಪಿ.ರವಿಕುಮಾರ್ ಗಣಿಗ ಉದ್ಘಾಟನೆ
  • ಎವರೆಡಿ ಕಂಪನಿಯಿಂದ ಸಿಎಸ್‌ಆರ್ ಅನುದಾನದಡಿ ದುರಸ್ಥಿ
ಮಂಡ್ಯ: ನಗರದ ಕೆಎಸ್‌ಆರ್‌ಟಿಸಿ ನಿಲ್ದಾಣದ ಆವರಣದಲ್ಲಿ ನವೀಕರಣಗೊಂಡ ಶುದ್ಧ ಕುಡಿಯುವ ನೀರಿನ ಘಟಕ್ಕೆ ಶಾಸಕ ಪಿ.ರವಿಕುಮಾರ್ ಗಣಿಗ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಸಾರಿಗೆ ನಿಲ್ದಾಣದ ಆವರಣದಲ್ಲಿ ಕೆಟ್ಟುಹೋಗಿದ್ದ ಶುದ್ಧ ಕುಡಿಯುವ ನೀರಿನ ಘಟಕವನ್ನು ಎವರೆಡಿ ಕಂಪನಿಯವರು ಸಿಎಸ್‌ಆರ್ ಅನುದಾನದಡಿಯಲ್ಲಿ ದುರಸ್ಥಿಗೊಳಿಸಿ ಸಾರ್ವಜನಿಕರಿಗೆ ಅರ್ಪಿಸಿದ್ದಾರೆ. ಇದರಿಂದ ಸಹಸ್ರಾರು ಜನರಗೆ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಕಾರ್ಖಾನೆಗಳು ತಾವು ಗಳಿಸಿದಂತಹ ಲಾಭದ ಸ್ವಲ್ಪ ಭಾಗವನ್ನು ಈ ರೀತಿಯಲ್ಲಿ ಜನರಿಗಾಗಿ ಕೊಡುಗೆ ನೀಡುವುದು ಶ್ಲಾಘನೀಯ. ಮುಂದೆಯೂ ಸಹ ಇಂತಹ ಸಾಮಾಜಿಕ ಕಾರ‌್ಯಗಳನ್ನು ಮಾಡಿ ಜನತೆಗೆ ಒಳಿತನ್ನು ಮಾಡಲಿ ಎಂದು ಹಾರೈಸಿದರು.
ಕೆಎಸ್‌ಆರ್‌ಟಿಸಿ ಮಂಡ್ಯ ವಿಭಾಗೀಯ ನಿಯಂತ್ರಣಾಧಿಕಾರಿ ಶರಣ ಬಸವರಾಜ್, ವ್ಯವಸ್ಥಾಪಕ ವೈ.ಪ್ರಸಾದ್ ತಂತ್ರಿ, ಮಾನವ ಸಂಪನ್ಮೂಲ ಅಧಿಕಾರಿ ಪ್ರಕಾಶ್, ನಾಗೇಶ್ ಇತರರಿದ್ದರು.