- ಬಾಚನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ
ಮಳವಳ್ಳಿ: ತಾಲೂಕಿನ ಬಾಚನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಸಂಜೆ ಆಟೋ ಉರುಳಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಕೊಳ್ಳೇಗಾಲ ಪಟ್ಟಣದ ರವಿ(42) ಮೃತ ಚಾಲಕ. ಇವರು ಪಟ್ಟಣದ ಕಡೆಗೆ ಆಟೋದಲ್ಲಿ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಗೆ ಉರುಳಿಬಿದ್ದು ಅವಘಡ ಸಂಭವಿಸಿದೆ. ಕೂಡಲೇ ಸ್ಥಳೀಯರು ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಕರೆತಂದರಾದರೂ ಅಷ್ಟರಲ್ಲಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಮೃತ ದೇಹವನ್ನು ಶವಾಗಾರಕ್ಕೆ ಸ್ಥಳಂತರಿಸಲಾಗಿತ್ತು. ಬುಧವಾರ ಮರಣೋತ್ತರ ಪರೀಕ್ಷೆಯ ನಂತರ ಕುಟುಂಬದವರಿಗೆ ಒಪ್ಪಿಸಲಾಗಿದೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.