- ಚಾಮನಹಳ್ಳಿಯ ಡಾ.ಬಿ.ಆರ್.ಅಂಬೇಡ್ಕರ್ ಭವನದ ಆವರಣ
- ಸಂಜೆ 4 ಗಂಟೆಗೆ
ಮದ್ದೂರು: ತಾಲೂಕಿನ ಚಾಮನಹಳ್ಳಿಯ ಡಾ.ಬಿ.ಆರ್.ಅಂಬೇಡ್ಕರ್ ಭವನದ ಆವರಣದಲ್ಲಿ ಫೆ.25 ರಂದು ಸಂಜೆ 4 ಗಂಟೆಗೆ ಒಂದು ತಿಂಗಳ ಚರ್ಮವಾದ್ಯ ತರಬೇತಿ ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಕರ್ನಾಟಕ ಬಾಬು ಜಗಜೀವನರಾಂ ಸಂಘಗಳ ಒಕ್ಕೂಟ ಅಧ್ಯಕ್ಷ ಚಾಮನಹಳ್ಳಿ ಮಂಜು ತಿಳಿಸಿದ್ದಾರೆ.
ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ, ಅಖಿಲ ಕರ್ನಾಟಕ ಡಾ. ಬಾಬು ಜಗ ಜೀವನರಾಂ ಸಂಘಗಳ ಒಕ್ಕೂಟ, ತಾಲೂಕು ಕರ್ನಾಟಕ ಜಾನಪದ ಪರಿಷತ್ ವತಿಯಿಂದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಎಲ್.ನಾಗರಾಜು ಕಾರ್ಯಾಗಾರಕ್ಕೆ ಚಾಲನೆ ನೀಡಲಿದ್ದು, ಕರ್ನಾಟಕ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಡಿ.ಪಿ.ಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ಶಿಕ್ಷಕ ಸಿ.ಮಂಜುನಾಥ್ (ನಗಾರಿ ಮಂಜು), ಶಿಬಿರದ ಮಾರ್ಗದರ್ಶಕ ಡಾ.ಕೆ.ಎಂ.ವಸುಂಧರ, ಮುಖ್ಯ ಸಂಚಾಲಕ ಕೆ.ಎಂ.ಕೃಷ್ಣೇಗೌಡ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.