ಉಪವಿಭಾಗೀಯ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಭಾನುವಾರ ಮೂರು ದಿನಗಳ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ತಹಸೀಲ್ದಾರ್ ಬಸವ ರಡ್ಡೆಪ್ಪ ರೋಣದ ಚಾಲನೆ ನೀಡಲಾಯಿತು. ಮಹದೇವು, ಲಕ್ಷ್ಮೀ ದೇಶಪಾಂಡೆ, ಎಣ್ಣೆಹೊಳೆಕೊಪ್ಪಲು ಮಂಜುನಾಥ್, ಹಾರೋಹಳ್ಳಿ ಅಭಿಲಾಷ್ ಇದ್ದರು. 
ಮಂಡ್ಯ

ಶೇ.100 ಗುರಿ ಸಾಧನೆ ನಿರೀಕ್ಷೆ

ಲೋಕೇಶ್ ಮನು. ಡಿ
ಪಾಂಡವಪುರ: ಪಟ್ಟಣದ ಉಪವಿಭಾಗೀಯ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಭಾನುವಾರ ಮೂರು ದಿನಗಳ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ತಹಸೀಲ್ದಾರ್ ಬಸವ ರಡ್ಡೆಪ್ಪ ರೋಣದ ಮಗುವಿಗೆ ಪೋಲಿಯೋ ಹನಿ ಹಾಕುವ ಮೂಲಕ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಪಾಂಡವಪುರ ಉಪವಿಭಾಗೀಯ ಸರ್ಕಾರಿ ಸೇರಿದಂತೆ ಒಟ್ಟು 57 ಕೇಂದ್ರಗಳಲ್ಲಿ ಪೋಲಿಯೋ ಲಸಿಕೆಯನ್ನು ನೀಡಲಾಗುತ್ತದೆ. ಸಾರ್ವಜನಿಕರು ಈ ಸೌಲಭ್ಯ ಸದ್ಬಳಕೆ ಮಾಡಿಕೊಂಡು ತಮ್ಮ ಮಕ್ಕಳಿಗೆ ತಪ್ಪದೆ ಪೋಲಿಯೋ ಹನಿ ಹಾಕಿಸಬೇಕು ಎಂದು ಮನವಿ ಮಾಡಿದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಸಿ.ಎ.ಅರವಿಂದ ಮಾತನಾಡಿ, ಇಂದಿನಿಂದ ಮೂರು ದಿನಗಳವರೆಗೆ ಪಟ್ಟಣದ ಉಪವಿಭಾಗೀಯ ಸರ್ಕಾರಿ ಆಸ್ಪತ್ರೆ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಸೇರಿದಂತೆ ವಿವಿಧೆಡೆ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗುವುದು. ನಾಳೆ ಮತ್ತು ನಾಡಿದ್ದು ಅಂಗನವಾಡಿ, ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಪೋಲಿಯೋ ಲಸಿಕೆ ಹಾಕಿಸಲು ಮುಂದಾಗಲಿದ್ದು ತಾಲೂಕಿನಲ್ಲಿ ಶೇ.100 ಗುರಿ ಸಾಧಿಸಲಾಗುತ್ತದೆ ಎಂದರು.
ಶಿಕ್ಷಣ ಸಂಯೋಜಕ ಮಹದೇವು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಮೇಲ್ವಿಚಾರಕಿ ಲಕ್ಷ್ಮೀ ದೇಶಪಾಂಡೆ, ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಎಣ್ಣೆಹೊಳೆಕೊಪ್ಪಲು ಮಂಜುನಾಥ್, ಹಾರೋಹಳ್ಳಿ ಅಭಿಲಾಷ್, ಕ್ಷೇತ್ರ ಆರೋಗ್ಯಾಧಿಕಾರಿ ಶಿವಮ್ಮ, ಆರೋಗ್ಯ ನಿರೀಕ್ಷಕ ಪುಟ್ಟಸ್ವಾಮಿ, ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗ, ಅಂಗನವಾಡಿ ಕಾರ್ಯಕರ್ತೆಯರು ಇದ್ದರು.