ಕೆ.ಆರ್.ಪೇಟೆ ತಾಲೂಕಿನ ಹೊಸಹೊಳಲು ಗ್ರಾಮದ ಶ್ರೀಲಕ್ಷ್ಮೀ ನಾರಾಯಣಸ್ವಾಮಿಯವರ ಬ್ರಹ್ಮರಥೋತ್ಸವವು ಸಾವಿರಾರು ಭಕ್ತಾಧಿಗಳ ಜಯಘೋಷಗಳ ನಡುವೆ ಸಡಗರ ಸಂಭ್ರಮದಿಂದ ಅದ್ದೂರಿಯಾಗಿ ನೆರವೇರಿತು. 
ಮಂಡ್ಯ

ಜಾತ್ರೆ, ಉತ್ಸವಗಳಿಂದ ಅಸಮಾನತೆ ದೂರ

ಪ್ರಮುಖ ಮುಖ್ಯಾಂಶಗಳು

  • festivals keep inequality
ಕೆ.ಆರ್.ಪೇಟೆ: ತಾಲೂಕಿನ ಹೊಸಹೊಳಲು ಗ್ರಾಮದ ಆರಾಧ್ಯ ದೈವ ಶ್ರೀಲಕ್ಷ್ಮೀ ನಾರಾಯಣಸ್ವಾಮಿಯವರ ಬ್ರಹ್ಮರಥೋತ್ಸವವು ಸಾವಿರಾರು ಭಕ್ತಾಧಿಗಳ ಜಯಘೋಷಗಳ ನಡುವೆ ಅದ್ದೂರಿಯಾಗಿ ನೆರವೇರಿತು.
ಶಾಸಕ ಎಚ್.ಟಿ.ಮಂಜು, ಸಮಾಜ ಸೇವಕರಾದ ಮಲ್ಲಿಕಾರ್ಜುನ, ಸೋಮಶೇಖರ್, ಗ್ರೇಡ್-2 ತಹಸೀಲ್ದಾರ್ ಲೋಕೇಶ್ ಹಾಗೂ ದೇವಾಲಯದ ಧರ್ಮದರ್ಶಿಗಳಾದ ರಾಮಚಂದ್ರ ಅವರು ಶ್ರೀಲಕ್ಷ್ಮೀ ನಾರಾಯಣಸ್ವಾಮಿಯವರ ಉತ್ಸವ ಮೂರ್ತಿಗೆ ಸಾಂಪ್ರದಾಯಕ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು.
ಶಾಸಕ ಎಚ್.ಟಿ.ಮಂಜು ಮಾತನಾಡಿ, ಹಬ್ಬ ಹರಿದಿನಗಳು, ಜಾತ್ರೆ, ಉತ್ಸವಗಳು ನಮ್ಮ ಸಂಸ್ಕೃತಿಯ ಪ್ರತಿಬಿಂಬಗಳಾಗಿವೆ. ರಥೋತ್ಸವದ ಸಂಭ್ರಮದಲ್ಲಿ ಎಲ್ಲ ಜಾತಿ ವರ್ಗಗಳ ಜನರು ಒಂದಾಗಿ ಭಗವಂತನ ನಾಮಸ್ಮರಣೆ ಮಾಡಿದಾಗ ಸಾಮಾಜಿಕ ಅಸಮಾನತೆ ದೂರಾಗಿ ಪರಸ್ಪರ ಪ್ರೀತಿ, ವಿಶ್ವಾಸ, ಸ್ನೇಹ ಸೌಹಾರ್ದತೆ ಮೂಡಲಿದೆ ಎಂದು ಹೇಳಿದರು.
ರಥೋತ್ಸವದ ಸಂದರ್ಭದಲ್ಲಿ ಕುರುಹಿನಶೆಟ್ಟಿ ಸಮಾಜದ ಬಂಧುಗಳು ನೆರೆದಿದ್ದ ಸಾವಿರಾರು ಭಕ್ತಾದಿಗಳಿಗೆ ಮಜ್ಜಿಗೆ ಹಾಗೂ ಪಾನಕವನ್ನು ವಿತರಿಸಿದರು.
ಪಟ್ಟಣ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕರಾದ ಸುಮಾ ರಾಣಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸುಷ್ಮಾ, ಪರಿಸರ ಇಂಜಿನಿಯರ್ ಪ್ರಿಯಾಂಕಾ, ಪುರಸಭೆಯ ಸಹಾಯಕ ಇಂಜಿನಿಯರ್ ಚೌಡಪ್ಪ ಇತರರು ಇದ್ದರು.