ಹಲಗೂರು ಸಮೀಪದ ಬ್ಯಾಡರಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಗಿತ್ತು. ಗ್ರಾಮಾಭಿವೃದ್ಧಿ ಅಧಿಕಾರಿ ಕೆ.ಲಿಂಗಯ್ಯ, ಗ್ರಾಮ ಪಂಚಾಯಿತಿ ಸದಸ್ಯ ರಮೇಶ್, ಅಲುಮೇಲಮ್ಮ, ದಾಸ ಭೋವಿ, ಕಾಳರಾಜು,ಜಿ.ಎಸ್.ಪ್ರಕಾಶ್ , ಸಂತೋಷ್ ಇತರರು ಇದ್ದರು. 
ಮಂಡ್ಯ

ಬ್ಯಾಡರಹಳ್ಳಿ ಗ್ರಾಪಂ ಸದಸ್ಯರಿಗೆ ಬೀಳ್ಕೊಡುಗೆ

ಹಲಗೂರು: ಸಮೀಪದ ಬ್ಯಾಡರಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಐದು ವರ್ಷ ಆಡಳಿತ ಪೂರೈಸಿದ ಅಧ್ಯಕ್ಷ ಸೇರಿದಂತೆ ಎಲ್ಲ ಸದಸ್ಯರಿಗೂ ಬೀಳ್ಕೊಡುಗೆ ಸಮಾರಂಭವನ್ನು ಪಂಚಾಯಿತಿ ಆವರಣದಲ್ಲಿ ಶುಕ್ರವಾರ ಆಯೋಜಿಸಲಾಗಿತ್ತು.
2021 ರಿಂದ 2026ರವರೆಗೆ ಐದು ವರ್ಷಗಳ ಕಾಲ ಉತ್ತಮ ಆಡಳಿತ ನಡೆಸಿದ 20 ಸದಸ್ಯರಿಗೆ ಗ್ರಾಮ ಪಂಚಾಯಿತಿ ವತಿಯಿಂದ ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ ಹಣ್ಣು ನೀಡಿ ಸನ್ಮಾನಿಸಿ ಅಭಿನಂದಿಸಲಾಯಿತು.
ಗ್ರಾಮಾಭಿವೃದ್ಧಿ ಅಧಿಕಾರಿ ಕೆ.ಲಿಂಗಯ್ಯ ಮಾತನಾಡಿ, ಈ ಸಾಲಿನ ಆಡಳಿತ ಅವಧಿಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳು ನಡೆದಿವೆ. ಇದಕ್ಕೆ ಸಲಹೆ ಮತ್ತು ಸಹಕಾರ ನೀಡಿದ ಆಡಳಿತ ಮಂಡಳಿ ಸದಸ್ಯರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.
ಗ್ರಾಮ ಪಂಚಾಯಿತಿ ಸದಸ್ಯ ರಮೇಶ್ ಮಾತನಾಡಿ, ಆಡಳಿತ ನಡೆಸಿದ ಎಲ್ಲ ಸದಸ್ಯರಿಗೆ ಗ್ರಾಮ ಪಂಚಾಯಿತಿ ಅಧಿಕಾರಿಗಳಿಂದ ಬೀಳ್ಕೊಡುಗೆ ಸಮಾರಂಭ ಆಯೋಜಿಸಿ ಸನ್ಮಾನಿಸಿರುವುದು ಶ್ಲಾಘನೀಯ. ಈ ಪಂಚಾಯಿತಿಯಲ್ಲಿ ನರೇಗಾ ಮತ್ತು 15ನೇ ಹಣಕಾಸು ಯೋಜನೆಯಲ್ಲಿ ಹಲವು ಅಭಿವೃದ್ಧಿ ಕೆಲಸಗಳು ಸದಸ್ಯರ ಸಹಕಾರದಿಂದ ಉತ್ತಮವಾಗಿ ನಡೆದಿದೆ. ಅದಕ್ಕೆ ಸಹಕಾರ ನೀಡಿದ ಅಧಿಕಾರಿಗಳು ಮತ್ತು ಸದಸ್ಯರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದರು.
ಅಲುಮೇಲಮ್ಮ, ದಾಸ ಭೋವಿ, ಕಾಳರಾಜು,ಜಿ.ಎಸ್.ಪ್ರಕಾಶ್ , ಸಂತೋಷ್ ಇತರರು ಇದ್ದರು.