ಆತ್ಮಹತ್ಯೆ 
ಮಂಡ್ಯ

ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಸಾವು

ಶಿವಶಂಕರ್ ಎಂ. ಹೆಬ್ಬಳ್ಳ

ಪ್ರಮುಖ ಮುಖ್ಯಾಂಶಗಳು

  • ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಗುರುವಾರ ಚಿಕಿತ್ಸೆಗೆ ಸ್ಪಂದಿಸದೆ ಮೃತ
ಮಳವಳ್ಳಿ : ತಾಲೂಕಿನ ಅಂಚೇದೊಡ್ಡಿ ಗ್ರಾಮದಲ್ಲಿ ಸಾಲಭಾದೆಯಿಂದ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಗುರುವಾರ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಈ ಗ್ರಾಮದ ನಂಜೇಗೌಡ(56) ಆತ್ಮಹತ್ಯೆ ಮಾಡಿಕೊಂಡವರು. ಡಿ.9 ರಂದು ಮನೆಯಲ್ಲಿ ಕ್ರಿಮಿನಾಶಕ ಔಷಧ ಸೇವಿಸಿ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಇವರನ್ನು ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಇವರು ಕೃಷಿ ಕಾರ್ಯಕ್ಕಾಗಿ ಸೊಸೈಟಿ, ಸ್ವಸಹಾಯ ಸಂಘಗಳು ಹಾಗೂ ಖಾಸಗಿ ವ್ಯಕ್ತಿಗಳಿಂದ ಕೈ ಸಾಲ ಸೇರಿದಂತೆ ಸುಮಾರು 10 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.