ಮದ್ದೂರು: ತಾಲೂಕಿನ ಕೊಪ್ಪ ಹೋಬಳಿಯ ಅಬಲವಾಡಿ ಗ್ರಾಮದಲ್ಲಿ ಭಾನುವಾರ ಹಾವು ಕಚ್ಚಿ ರೈತ ಮಹಿಳೆ ಮೃತಪಟ್ಟಿದ್ದಾರೆ. ಗ್ರಾಮದ ಚಿಕ್ಕತಿಮ್ಮೆಗೌಡ ಅವರ ಪತ್ನಿ ಮರಿಚಿಕ್ಕಮ್ಮ (58) ಮೃತರು. ಮಧ್ಯಾಹ್ನ ತಮ್ಮ ಜಮೀನಿನಲ್ಲಿ ಕೃಷಿ ಚಟುವಟಿಕೆ ಮಾಡುವಾಗ ಹಾವು ಕಚ್ಚಿದ್ದು, ಹೆಚ್ಚಿನ ಚಿಕಿತ್ಸೆಗೆ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ರಾತ್ರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.