ಹಲಗೂರು ಗ್ರಾಮ ದೇವತೆ ಪಟ್ಟಲದಮ್ಮನ ದೇವಸ್ಥಾನದಲ್ಲಿ ವಿಶೇಷ ಪೂಜೆ.
ಹಲಗೂರು: ಗ್ರಾಮ ದೇವತೆಯಾದ ಪಟ್ಟಲದಮ್ಮನ ದೇವಸ್ಥಾನದಲ್ಲಿ ಆಷಾಢ ಮಾಸದ ಮೊದಲನೇ ಶುಕ್ರವಾರ ವಿಶೇಷವಾಗಿ ಪೂಜೆ ಪುನಸ್ಕಾರ ನಡೆಸಿ ಬಂದ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗಿಸಲಾಯಿತು.
ಅರ್ಚಕ ಕೃಷ್ಣಪ್ಪ ಮಾತನಾಡಿ, ಆಷಾಢ ಮಾಸದಲ್ಲಿ ಪ್ರತಿ ಮಂಗಳವಾರ, ಶುಕ್ರವಾರ ವಿಶೇಷವಾಗಿ ಪೂಜಾ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದ್ದು, ಮೊದಲನೇ ಮಂಗಳವಾರ ಪೂಜೆ ನಡೆಸಲಾಗಿದ್ದು ಶುಕ್ರವಾರ ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ದೇವಿಯ ಮೂರ್ತಿಯನ್ನು ಶುಚಿಗೊಳಿಸಿ ಹಾಲಿನ ಅಭಿಷೇಕ, ಪಂಚಾಮೃತ ಅಭಿಷೇಕ ನಡೆಸಿ ನಂತರ ವಿವಿಧ ಪುಷ್ಪಗಳಿಂದ ಅಲಂಕರಿಸಿ ಮಹಾ ಮಂಗಳಾರತಿ ಮಾಡಲಾಯಿತು ಎಂದರು.
ಸಕಾಲಕ್ಕೆ ಮಳೆಯಾಗಿ ವ್ಯವಸಾಯಕ್ಕೆ ಹಾಗೂ ದನ ಕರುಗಳಿಗೆ ಕುಡಿಯಲು ನೀರು, ಮೇವು ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು.