ಮಂಡ್ಯ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಆರೋಗ್ಯ ತಪಾಸಣೆ ಶಿಬಿರವನ್ನು ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯಾನಂದ ಉದ್ಘಾಟಿಸಿದರು.
- ನಗರದ ಪತ್ರಕರ್ತರ ಭವನದಲ್ಲಿ ಆರೋಗ್ಯ ತಪಾಸಣಾ ಶಿಬಿರ
- ಮಣಿಪಾಲ್ ಆಸ್ಪತ್ರೆ ಸಹಯೋಗದಲ್ಲಿ ಆಯೋಜನೆ
ಸಮಾಜದ ಅಂಕು ಡೊಂಕುಗಳನ್ನು ತಿದ್ದುವಲ್ಲಿ ಮಾಧ್ಯಮದವರ ಪಾತ್ರ ಅಪಾರ ಎಂದು ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯಾನಂದ ಹೇಳಿದರು.
ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಹಾಗೂ ಮಣಿಪಾಲ್ ಆಸ್ಪತ್ರೆ ವತಿಯಿಂದ ನಗರದ ಪತ್ರಕರ್ತರ ಭವನದಲ್ಲಿ ಸದಸ್ಯರಿಗೆ ಆಯೋಜಿಸಿದ್ದ ಆರೋಗ್ಯ ಉಚಿತ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಮಾಜವನ್ನು ತಪ್ಪುಗಳನ್ನು ಎತ್ತಿ ಹಿಡಿಯುವ ಪತ್ರಕರ್ತರು ತಮ್ಮ ಆರೋಗ್ಯವನ್ನು ಕಡೆಗಣಿಸಬಾರದು. ಇಂದು ಆರೋಗ್ಯವೇ ಭಾಗ್ಯ ಎಂಬುದನ್ನು ಮರೆಯಬಾರದು. ತಮ್ಮ ಕೆಲಸದ ನಡುವೆ ಆಗಾಗ್ಗೆ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಜತೆಗೆ ತಮ್ಮ ಕುಟುಂಬದ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು ಎಂದು ಹೇಳಿದರು.
ಮಾಂಡವ್ಯ ಎಕ್ಸ್‌ಲೆಕ್ಸ್ ಕಾಲೇಜಿನ ಪ್ರಾಂಶುಪಾಲ ಡಾ.ಶ್ರೀನಿವಾಸ್ ಮಾತನಾಡಿ, ಮಾಧ್ಯಮದವರ ಕಷ್ಟ ಸುಖಗಳನ್ನು ನಾನೂ ಸಹ ಖುದ್ದಿ ತಿಳಿದಿದ್ದೇನೆ. ಸ್ವತಃ ಅನುಭವಿಸಿದ್ದೇನೆ. ಸದಾ ಒಂದಲ್ಲ ಒಂದು ಕೆಲಸದಲ್ಲಿ ತೊಡಗುವ ಪತ್ರಕರ್ತರು ಆರೋಗ್ಯವನ್ನೂ ಕಾಪಾಡಿಕೊಳ್ಳಬೇಕು. ಸದಸ್ಯರಿಗಾಗಿ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಮತ್ತೀಕೆರೆ ಜಯರಾಂ, ಜಿಲ್ಲಾಧ್ಯಕ್ಷ ಕೆ.ಎಸ್.ರಾಘವೇಂದ್ರ, ಜಿಲ್ಲಾ ಉಪಾಧ್ಯಕ್ಷರಾದ ಕೆ.ಸಿ.ಮಂಜುನಾಥ, ರವಿ ಸಾವಂದಿಪುರ, ಪ್ರಧಾನ ಕಾರ್ಯದರ್ಶಿ ಕಾಡುಕೊತ್ತನಹಳ್ಳಿ ಶಶಿಧರ್, ಮಣಿಪಾಲ್ ಆಸ್ಪತ್ರೆಯ ಸುಮಂತ್ ಇತರರಿದ್ದರು.
ಇದೇ ವೇಳೆ ಹೃದಯಾಘಾತ, ಸ್ಟ್ರೋಕ್ ಸೇರಿದಂತೆ ಕೆಲ ಆರೋಗ್ಯ ಸಮಸ್ಯೆಯಾದಾಗ ತುರ್ತು ಚಿಕಿತ್ಸೆ ನೀಡುವ ಬಗ್ಗೆ ಮಣಿಪಾಲ್ ಆಸ್ಪತ್ರೆಯ ಮಿಥುನ್ ಪ್ರಾತ್ಯಕ್ಷಿತೆಯೊಂದಿಗೆ ತರಬೇತಿ ನೀಡಿದರು. ಇದೇ ವೇಳೆ ಸಂಘದ ಸದಸ್ಯರಿಗೆ ಬಿಪಿ, ಶುಗರ್ ಸೇರಿದಂತೆ ಆರೋಗ್ಯ ತಪಾಸಣೆ ಮಾಡಲಾಯಿತು. ಜತೆಗೆ ಡಿಜಿಟಲ್ ನೇಬರ್‌ಹುಡ್ ಪ್ರಿವಿಲೇಜ್ ಕಾರ್ಡ್‌ಗೆ ನೋಂದಣಿ ಮಾಡಿಕೊಳ್ಳಲಾಯಿತು.