ಮದ್ದೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿರುವ ಸ್ವಾಮಿ ವಿವೇಕಾನಂದರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಸ್ವಾಮಿ ವಿವೇಕಾನಂದರ 163ನೇ ಜನ್ಮದಿನವನ್ನು ಸೋಮವಾರ ಆಚರಿಸಲಾಯಿತು. ಗೀತಾ, ಲಾರಾ ಪ್ರಸನ್ನ, ಮೋಹನ್, ಸುಶೀಲಮ್ಮ, ಚಂದ್ರಮ್ಮ ಇದ್ದರು.
ಮದ್ದೂರು: ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿರುವ ಸ್ವಾಮಿ ವಿವೇಕಾನಂದರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಸ್ವಾಮಿ ವಿವೇಕಾನಂದರ 163ನೇ ಜನ್ಮದಿನವನ್ನು ಸೋಮವಾರ ಆಚರಣೆ ಮಾಡಲಾಯಿತು.
ಸ್ವಾಮಿ ವಿವೇಕಾನಂದ ಯುವ ಸಾಂಸ್ಕೃತಿಕ ಮತ್ತು ಕ್ರೀಡಾ ಸಂಘದ ಆಶ್ರಯದಲ್ಲಿ ರಾಷ್ಟ್ರೀಯ ಯುವ ದಿನವನ್ನು ವಿವೇಕಾನಂದ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಕಾಲೇಜಿನ ಪ್ರಾಂಶುಪಾಲೆ ಗೀತಾ ಚಾಲನೆ ನೀಡಿ ಮಾತನಾಡಿ, ಕಾಲೇಜಿನ ಆವರಣದಲ್ಲಿ ಸ್ಥಾಪನೆಗೊಂಡಿರುವ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸಂರಕ್ಷಿಸುವುದು ನಮ್ಮ ನಿಮ್ಮೆಲ್ಲರ ಹೊಣೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಚಿಕಾಗೋದಲ್ಲಿ ನಡೆದ ಸರ್ವಧರ್ಮ ಸಮ್ಮೇಳನದಲ್ಲಿ ಹಿಂದೂ ಧರ್ಮದ ಮಹತ್ವವನ್ನು ಜಗತ್ತಿಗೆ ಪರಿಚಯಿಸಿದ ಮಹಾನ್ ಸಂತ ಎಂದು ತಿಳಿಸಿದರು.
ಸ್ವಾಮಿ ವಿವೇಕಾನಂದ ಯುವ ಸಾಂಸ್ಕೃತಿಕ ಮತ್ತು ಕ್ರೀಡಾ ಸಂಘದ ಕಾರ್ಯದರ್ಶಿ ಲಾರಾ ಪ್ರಸನ್ನ, ದೈಹಿಕ ಶಿಕ್ಷಣ ಶಿಕ್ಷಕ ಮೋಹನ್ ಕುಮಾರ್, ಶಿಕ್ಷಕರಾದ ಸುಶೀಲಮ್ಮ, ಚಂದ್ರಮ್ಮ ಸೇರಿದಂತೆ ಶಿಕ್ಷಕರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.